ವಿದ್ಯುತ್‍ಶಾರ್ಟ್ ಸಕ್ರ್ಯೂಟ್‍ನಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

Fire Fierce Hot Flames Burning Orange Heat

ಕೋಲಾರ,ಜೂ.21-ವಿದ್ಯುತ್‍ಶಾರ್ಟ್ ಸಕ್ರ್ಯೂಟ್‍ನಿಂದ ಫರ್ನಿಚರ್ ಮಾರಾಟದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ನಗರದ ಇಟಿಸಿಎಂ ಆಸ್ಪತ್ರೆ ಸರ್ಕಲ್ ಸಮೀಪ ಶೇಖ್ ಬಷೀರ್ ಎಂಬುವರು ಹಳೇ ಫರ್ನಿಚರ್ ಮಾರಾಟದ ಅಂಗಡಿಯನ್ನು ನಡೆಸುತ್ತಿದ್ದರು. ನಿನ್ನೆ ರಾತ್ರಿ 2.30ರ ಸುಮಾರಿನಲ್ಲಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಫರ್ನಿಚರ್‍ಗಳು ಬೆಂಕಿಗೆ ಆಹುತಿಯಾಗಿದ್ದು, ಅಕ್ಕಪಕ್ಕದ ಮನೆಯ ಗೋಡೆಗಳಿಗೂ ಹಾನಿ ಉಂಟಾಗಿದೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಅಧಿಕಾರಿ ಹಾಗೂ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ