ಉತ್ತರಾಖಂಡ್ ನಲ್ಲಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಜೂ.21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ನಲ್ಲಿ ಆಚರಿಸಲಿದ್ದಾರೆ.
ಅರಣ್ಯ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ ಮಾಡಲಿದ್ದು ಯೋಗಕ್ಕೆ ಸಂಬಂಧಿಸಿದ ಸರಣಿ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ. ಉತ್ತರಾಖಂಡ್ ನಲ್ಲಿ ನಡೆಯಲಿರುವ ಯೋಗ ದಿನಾಚರಣೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಯೋಗ ಕೇವಲ ವ್ಯಾಯಾಮವಲ್ಲ, ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿ ಎಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದ್ದು, ಒತ್ತಡವನ್ನು ನಿರ್ವಹಿಸಲು ಯೋಗ ಸಹಕಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ. 2015 ರಲ್ಲಿ ನವದೆಹಲಿಯಲ್ಲಿ 2016 ರಲ್ಲಿ ಚಂಡೀಗಢ, 2017 ರಲ್ಲಿ ಲಖನೌದಲ್ಲಿ ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದ್ದರು.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ