ಜನರಲ್ ಚೆಕಪ್ ಗಾಗಿ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಪಿತ್ತಕೋಶಕ್ಕೆ ಸ್ಟಂಟ್ ಅಳವಡಿಸಿ ಆರು ತಿಂಗಳು ಕಳೆದ ಹಿನ್ನೆಲೆಯಲ್ಲಿ ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು, ಜನರಲ್ ಚೆಕ್ ಅಪ್ ಗಾಗಿ ಬಿಜಿಎಸ್ ಆಸ್ಪತ್ರೆಗೆ ಆಗಮಿಸಿದ್ದಾರೆ.

ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಮುಂಜಾನೆ ಆಗಮಿಸಿದ ಶ್ರೀಗಳು, ಕಾರಿನಿಂದ ಇಳಿದು ವ್ಹೀಲ್ ಚೇರ್ ನಂತಹ ಸೌಲಭ್ಯ ನಿರಾಕರಿಸಿ ನಡೆದುಕೊಂಡೇ ಆಸ್ಪತ್ರೆ ಒಳಗೆ ಹೋದರು. ಜನವರಿ 27 ರಂದು ಬಿಜಿಎಸ್‍ಗೆ ದಾಖಲಾಗಿದ್ದ ಶ್ರೀಗಳಿಗೆ ಮೂರು ಸ್ಟಂಟ್ ಅಳವಡಿಸಲಾಗಿತ್ತು. ಅದಕ್ಕೂ ಮುನ್ನ 5 ಸ್ಟಂಟ್ ಸೇರಿ ಒಟ್ಟು 8 ಸ್ಟಂಟ್ ಅಳವಡಿಸಲಾಗಿದೆ.

ಇದೀಗ ಸ್ಟಂಟ್ ಅಳವಡಿಸಿದ ಆರು ತಿಂಗಳಾದ ಕಾರಣ ಜನರಲ್ ಚೆಕ್ ಅಪ್ ಗಾಗಿ ಶ್ರೀಗಳು ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದು, ಡಾ. ರವೀಂದ್ರ ನೇತೃತ್ವದಲ್ಲಿ ವೈದ್ಯಕೀಯ ತಪಾಸಣೆ ನಡೆಸುತ್ತಿದ್ದಾರೆ. ಸಿದ್ದಗಂಗಾ ಮಠದ ಹಿರಿಯ ಶ್ರೀಗಳ ಜೊತೆ ಕಿರಿಯ ಶ್ರೀಗಳು ಕೂಡ ಆಸ್ಪತ್ರೆಗೆ ಆಗಮಿಸಿದ್ದು, ಮಠದಿಂದಲ್ಲೇ ಶ್ರೀಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ.

ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ತಪಾಸಣೆ ಪ್ರಾರಂಭವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರೆದುಕೊಂಡು ಬಂದಿದ್ದೇವೆ ಅಂತ ಸಿದ್ದಗಂಗಾ ಮಠದ ಕಿರಿಯ ಶ್ರೀ ಗಳು ಹೇಳಿದ್ದಾರೆ. ಸ್ವಲ್ಪ ಆರೋಗ್ಯದಲ್ಲಿ ಏರುಪೇರು ಇತ್ತು. ಅದಕ್ಕಾಗಿ ಅವರನ್ನು ಕರೆದುಕೊಂಡು ಬಂದಿದ್ದೇವೆ. ಅವರು ಟೆಸ್ಟ್ ಗೂ ಒಪ್ಪಿಲ್ಲ. ಈಗ ಟೆಸ್ಟ್ ಗಳು ನಡೀತಾ ಇದೆ. ಒಟ್ಟು ಐದರಿಂದ ಆರು ವೈದ್ಯರುಗಳ ಟೀಮ್ ಅವರನ್ನು ನೋಡಿಕೊಳ್ಳುತ್ತಿದ್ದೇವೆ. ಸ್ಟಂಟ್ ಶಾಶ್ವತ ಅಲ್ಲ ಆರೇಳು ತಿಂಗಳು ಅಷ್ಟೆ ಬರೋದು. ಸ್ಟಂಟ್ ವ್ಯತ್ಯಾಸ ಕಂಡು ಬಂದಿರೋದ್ರಿಂದ ಅಲ್ಟ್ರಾಸೌಂಡ್ ಕೂಡ ಮಾಡಲಾಗುತ್ತೆ. ಈಗಾಗಲೇ ರಕ್ತ ಪರೀಕ್ಷೆ ಇಸಿಜಿಗಳನ್ನು ಮಾಡಲಾಗುತ್ತಿದೆ. ರಿಪೋರ್ಟ್ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗುವ ಬಗ್ಗೆ ಹಾಗೂ ಮುಂದಿನ ಟ್ರೀಟ್ ಮೆಂಟ್ ಬಗ್ಗೆ ಚಿಂತನೆ ನಡೆಸಲಿದ್ದೇವೆ ಅಂರ ವೈದ್ಯ ಡಾ. ರವೀಂದ್ರ ಸ್ಪಷ್ಟಪಡಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ