ವಿಶ್ವ ಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದ ವತಿಯಿಂದ ಸರ್ಕಾರದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ನೀಡಲು ನೀಡಲಾಗುತ್ತದೆ

 

ಬೆಂಗಳೂರು, ಜೂ.21- ವಿಶ್ವ ಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದ ವತಿಯಿಂದ ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ವಿಶ್ವ ಕರ್ಮ ಸಮುದಾಯದವರಿಗೆ ಸರ್ಕಾರದ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ನೀಡಲು ನೀಡಲಾಗುತ್ತದೆ.
ಪಂಚವೃತ್ತಿ ಅಭಿವೃದ್ದಿಗಾಗಿ ನೆರವು, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಅರಿವು ಸಾಲ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ, ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಹಾಗೂ ಈ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ. 40,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 55,000 ಮೀರಬಾರದು.
ಕನಿಷ್ಟ 18 ರಿಂದ 55 ವರ್ಷಗಳ ಮಿತಿಯಲ್ಲಿರುವ ಹಾಗೂ ಎನ್.ಬಿ.ಸಿ.ಎಫ್.ಡಿ.ಸಿ. ಯೋಜನೆಯಲ್ಲಿ ಸಾಲ ಪಡೆಯುವವರು ಕುಟುಂಬದ ವಾರ್ಷಿಕ ವರಮಾನ 3 ರೂ.ಲಕ್ಷಗಳಿಗಿಂತ ಕಡಿಮೆ ಇರಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ಜುಲ್ಯೆ 16 ರೊಳಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 25ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ದಕ್ಷಿಣ ವಿಭಾಗ, ನಂ.123/1037, 1ನೇ ಮಹಡಿ, 20ನೇ ಮುಖ್ಯರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು-10.ದೂ.-080-23156006 ಅಥವಾ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ, ಬೆಂಗಳೂರು ಉತ್ತರ , ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ ಬೆಂಗಳೂರು- 560032. ದೂ- 080-23539600ನ್ನು ಸಂಪರ್ಕಿಸಬಹುದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ