ತೇರದಾಳ:ಜೂ-21: ಅಂತರಾಷ್ಟ್ರೀಯ ಯೋಗ ದಿನದಂದು ಯೋಗಾಸನ ಮಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ.
ಗುರುಪುರ ಕ್ಯಾಂಪಸ್ನ ಎಸ್.ಜೆ. ಹೆಣ್ಣು ಮಕ್ಕಳ ಪ್ರೌಢ ಶಾಲೆಯಲ್ಲಿ ಈ ದುರ್ಘಟನೆ ನಡೆದಿದ್ದು, ಶಿಕ್ಷಕ ವಿಶ್ವನಾಥ ಬಿರಾದರ್ (50) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಯೋಗಾಸನ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
Yoga Day, teacher died, heart-attack