ಪ್ರಭಾವ, ಒತ್ತಡಕ್ಕೆ ಮಣಿಯದೇ ದಕ್ಷ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ: ಹಿರಿಯ ಪೆÇಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

 

ಬೆಂಗಳೂರು, ಜೂ.22- ಯಾವುದೇ ಪ್ರಭಾವ, ಒತ್ತಡಕ್ಕೆ ಒಳಗಾಗದೆ ದಕ್ಷ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸಮಾಜದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಬೇಕೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಿರಿಯ ಪೆÇಲೀಸ್ ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದರು.

ಪೆÇಲೀಸ್ ಪ್ರಧಾನ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯ ಪೆÇಲೀಸ್ ಹಿರಿಯ ಅಧಿಕಾರಿಗಳ ಪರಿಶೀಲನಾ ಸಭೆಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಿರಿಯ ಪೆÇಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ತಮ್ಮ ಮೇಲೆ ಒತ್ತಡಗಳು ಬರಬಹುದು. ಜಾಗೃತರಾಗಿರಬೇಕು. ಯಾವುದೇ ಒತ್ತಡಗಳಿಗೆ ಮಣಿಯದಂತೆ ತಮ್ಮ ಪಾಲಿನ ಕರ್ತವ್ಯವನ್ನು ನಿಷ್ಪಕ್ಷಪಾತದಿಂದ ನಿರ್ವಹಿಸಿ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸಿ ಶಾಂತಿ-ಸೌಹಾರ್ದತೆ ಕಾಪಾಡಿ ಜನಸ್ನೇಹಿಯಾಗಿರಬೇಕು ಎಂದು ಸಲಹೆ ನೀಡಿದರು.
ರೌಡಿ ಚಟುವಟಿಕೆಗಳನ್ನು ನಿರ್ದಾಕ್ಷಿಣ್ಯವಾಗಿ ನಿಯಂತ್ರಿಸಿ, ಅಪರಾಧಿಗಳನ್ನು ಎಡೆಮುರಿಕಟ್ಟಿ ,ಭೂಗತ ಚಟುವಟಿಕೆಗಳನ್ನು ಮಟ್ಟ ಹಾಕಿ, ನಕ್ಸಲ್ ಚಟುವಟಿಕೆಗಳನ್ನು ತಲೆ ಎತ್ತದಂತೆ ಮಾಡಿ, ಕೋಮು ಸಂಘರ್ಷ ನಡೆಯದಂತೆ ನೋಡಿಕೊಂಡು ಎಲ್ಲ ಮಾಫಿಯಾಗಳನ್ನೂ ಮಟ್ಟ ಹಾಕಿ ಸಮಾಜ ಶಾಂತಿಯುತವಾಗಿ ಇರುವಂತೆ ಮಾಡಬೇಕಾದ ಜವಾಬ್ದಾರಿ ತಮ್ಮ ಮೇಲಿದೆ. ತಾವು ಅಹರ್ನಿಶಿಯಾಗಿ ಕೆಲಸ ಮಾಡಬೇಕು. ಈ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತರಬೇಕು ಎಂದು ಹೇಳಿದರು.

ಸಮಾಜದಲ್ಲಿ ಸೈದ್ಧಾಂತಿಕ ಹಿನ್ನೆಲೆಯಲ್ಲಿ ನಡೆಯುತ್ತಿರುವ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿರುವುದು ಸಮಾಜಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ನಿರ್ದಾಕ್ಷಿಣ್ಯವಾಗಿ ಇವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಜನಸಾಮಾನ್ಯರಿಗೆ ನೆಮ್ಮದಿಯ ವಾತಾವರಣವನ್ನು ಕಲ್ಪಿಸಬೇಕು ಎಂದು ಹೇಳಿದರು.
ಗಂಗಾಧರ್ ಚಡಚಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿರುವ ಎನ್‍ಕೌಂಟರ್‍ನಲ್ಲಿ ಪೆÇಲೀಸ್ ಅಧಿಕಾರಿಗಳು ಭಾಗಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೆÇಲೀಸರು ಸಾರ್ವಜನಿಕರಿಗೆ ನಂಬಿಕೆ ಬರುವ ರೀತಿಯಲ್ಲಿ ಕೆಲಸ ಮಾಡಬೇಕು. ಅಪರಾಧ ಜಗತ್ತಿನ ಜತೆ ಯಾರೇ ನಂಟು ಹೊಂದಿದ್ದರೂ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಐಜಿ ವಲಯ ಅಧಿಕಾರಿಗಳು, ಪೆÇಲೀಸ್ ವಸತಿ ನಿಗಮ, ಕಾನೂನು ಸುವ್ಯವಸ್ಥೆ ವಿಭಾಗ, ಕ್ರೈಮ್ ವಿಭಾಗ, ವಿವಿಧ ವಿಭಾಗಗಳ ಸ್ಥಿತಿಗತಿಗಳ ವಿವರವನ್ನು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ನೀಡಿದರು.

ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಮಾತನಾಡಿ, ಕೋಮು ಸೌಹಾರ್ದ ಕದಡುವಂತಹ ಶಕ್ತಿಗಳು ಸಮಾಜದಲ್ಲಿ ತಲೆ ಎತ್ತಲು ಮುಂದಾಗುತ್ತಿವೆ. ಇವುಗಳನ್ನು ನಿಯಂತ್ರಿಸಬೇಕಾದ ಅಗತ್ಯವಿದೆ. ಪೆÇಲೀಸರು ಸದಾ ಎಚ್ಚರದಲ್ಲಿರಬೇಕು. ತಾವು ಎಚ್ಚರ ತಪ್ಪಿದರೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಕಟ್ಟೆಚ್ಚರದಿಂದ ಕರ್ತವ್ಯ ನಿರ್ವಹಿಸಬೇಕೆಂದು ಪರಮೇಶ್ವರ್ ಹೇಳಿದರು.
ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು, ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಹಿರಿಯ ಪೆÇಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ