
ಮೈಸೂರು, ಜೂ.22-ಚಲಿಸುತ್ತಿದ್ದ ಬಸ್‍ನಿಂದ ಆಯತಪ್ಪಿ ಕೆಳಗೆ ಬಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮೈಸೂರು ತಾಲೂಕು ದೂಗತಹಳ್ಳಿ ಗ್ರಾಮದ ಚಿಕ್ಕಣ್ಣ(30) ಮೃತಪಟ್ಟ ದುರ್ದೈವಿ.
ನಿನ್ನೆ ಟಿ.ನರಸೀಪುರದಿಂದ ಮೈಸೂರಿಗೆ ಚಿಕ್ಕಣ್ಣ ತನ್ನ ಐದು ವರ್ಷದ ಮಗುವಿನೊಂದಿಗೆ ಖಾಸಗಿ ಬಸ್‍ನಲ್ಲಿ ಬರುತ್ತಿದ್ದರು. ಈ ವೇಳೆ ವರುಣ ಗ್ರಾಮದ ತಿರುವಿನಲ್ಲಿ ಮಗು ಸಮೇತ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಇಬ್ಬರಿಗೂ ಗಂಭೀರ ಗಾಯಗಳಾಗಿತ್ತು. ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಚಿಕ್ಕಣ್ಣ ಮೃತಪಟ್ಟಿದ್ದು, ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಚಾಲಕನ ಅತಿ ವೇಗದಿಂದ ಈ ಘಟನೆ ದುರ್ಘಟನೆ ನಡೆದಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಬಗ್ಗೆ ವರುಣ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.