ಬೆಂಗಳೂರು, ಜೂ.22- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ನಮ್ಮ ಅಪೇಕ್ಷೆಯಾಗಿದೆ. ಅವರು ಒಪ್ಪಿ ಬಂದರೆ ನಾವೇ ಭಾಗ್ಯವಂತರು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಇಂದಿಲ್ಲಿ ಹೇಳಿದರು.
ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ದೇವೇಗೌಡರು ಇಲ್ಲಿ ಸ್ಪರ್ಧಿಸಬೇಕೆಂಬುದು ನಮ್ಮ ಅಭಿಲಾಷೆಯಾಗಿದೆ. ಅವರು ಇಲ್ಲಿ ಸ್ಪರ್ಧಿಸಿದರೆ ನಾವೇ ಪುಣ್ಯವಂತರು ಎಂದು ಹೇಳಿದರು.
ಅಂಬರೀಷ್ ಅವರು ರಾಜಕಾರಣಿ ಎನ್ನುವುದಕ್ಕಿಂತ ಅವರೂ ಒಬ್ಬ ಉತ್ತಮ ಕಲಾವಿದರು. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಅವರು ಜೆಡಿಎಸ್ ಸೇರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.
ನಿವೃತ್ತಿ ಐಆರ್ಎಸ್ ಅಧಿಕಾರಿ ಲಕ್ಷ್ಮಿ ನರಸಿಂಹಗೌಡ ಸೇರಿದಂತೆ ಸಾಕಷ್ಟು ಜನ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಾಕಾಂಕ್ಷಿಗಳಾಗಿದ್ದಾರೆ.
ಪ್ರಸ್ತುತ ಹಾಸನ ಲೋಕಸಭೆಯನ್ನು ಪ್ರತಿನಿಧಿಸುತ್ತಿರುವ ಮಾಜಿ ಪ್ರಧಾನಿ ದೇವೇಗೌಡರು ಇಲ್ಲಿಂದ ಸ್ಪರ್ಧಿಸಬೇಕೆಂಬುದು ನಮ್ಮ ಅಭಿಲಾಷೆಯಾಗಿದೆ ಎಂದು ಅವರು ಹೇಳಿದರು.