ಮಹಾರಾಷ್ಟ್ರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಉಸ್ತುವಾರಿಯಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ನವದೆಹಲಿ:ಜೂ-೨೨: ಕಾಂಗ್ರೆಸ್‌‌ನ ಹಿರಿಯ ಮುಖಂಡ, ಲೋಕಸಭೆಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಜವಾಬ್ದಾರಿ ನೀಡಿದ್ದಾರೆ. ಮಹಾರಾಷ್ಟ್ರದ ಉಸ್ತುವಾರಿ ಆಗಿ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ.

ಮುಂಬರುವ ಹಲವು ರಾಜ್ಯಗಳ ವಿಧಾನ ಸಭೆ ಚುನಾವಣೆಗಾಗಿ ಕಾಂಗ್ರೆಸ್ ಸಿದ್ದತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಸಭೆ ಚುನಾವಣೆ ನಡೆಯುವ ರಾಜ್ಯಗಳಿಗೆ ಎಐಸಿಸಿ ಉಸ್ತುವಾರಿ ನೇಮಕ ಮಾಡುತ್ತಿದೆ. ಈ ನಿಟ್ಟಿನಲ್ಲಿ ರಾಹುಲ್‌ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರದ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮಧ್ಯಪ್ರದೇಶ, ಛತ್ತೀಲ್ ಗಡ, ರಾಜಸ್ತಾನ ಮತ್ತು ಒಡಿಸಾ ಹಾಗೂ ಮಿಜೋರಾಂಗಳಿಗೂ ಉಸ್ತುವಾರಿ ನೇಮಕ ಮಾಡಿ ಆದೇಶಿಸಿದೆ. ಈ ಕುರಿತ ಅಧಿಕೃತ ಪ್ರಕಟಣೆಯನ್ನು ಪಕ್ಷದ ಟ್ವಿಟ್ಟರ್‌ ಖಾತೆಯಲ್ಲಿ ಹಾಕಲಾಗಿದೆ.

Rahul Gandhi Appoints Mallikarjun Kharge, In-Charge of Party Affairs in Maharashtra

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ