
ಮಂಡ್ಯ, ಜೂ.22 – ಜಿಲ್ಲೆಯ ವಿ.ಸಿ. ನಾಲೆ ಸೇರಿದಂತೆ ಎಲ್ಲ ನಾಲೆಗಳಿಗೂ ಕೆಆರ್ಎಸ್ನಿಂದ ನೀರು ಹರಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ನಿನ್ನೆ ರಾತ್ರಿ 8 ಗಂಟೆಯಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿರುವುದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ. ವಿ.ಸಿ.ನಾಲೆಗೆ 2998 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಜಿಲ್ಲೆಯಲ್ಲಿ 22 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಬೆಳೆಗಳಿಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದರು. ನೀರು ಹರಿಸುವಂತೆ ರೈತರು ಮನವಿ ಕೂಡ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೆಳೆಗಳ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ನೀರು ಅತ್ಯಂತ ಅಮೂಲ್ಯವಾಗಿದ್ದು, ಕುಡಿಯುವ ನೀರು ಸೇರಿದಂತೆ ಎಲ್ಲದಕ್ಕೂ ನೀರನ್ನು ಮಿತವಾಗಿ ಬಳಕೆ ಮಾಡುವಂತೆ ಜಿಲ್ಲಾಧಿಕಾರಿ ಮಂಜುಶ್ರೀ ಮನವಿ ಮಾಡಿದ್ದಾರೆ.