ನೆಲಪಾಡ್ ಹ್ಯಾರೀಸ್ ಗುಂಪಿನ ಐವರು ಆರೋಪಿಗಳಿಗೆ ಜಾಮೀನು

ಬೆಂಗಳೂರು:ಜೂ-23: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗ್ಯಾಂಗ್‌ನ ಉಳಿದ ಐವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.

ಐವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ಸೆಷನ್ಸ್ ಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ನ್ಯಾಯಾಧೀಶ ವೆಂಕಟೇಶ್ ಪ್ರಸನ್ನ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಮಂಜುನಾಥ್, ಮಹಮದ್ ಅಶ್ರಫ್, ಮಹಮದ್ ನಾಸಿರ್, ಅರುಣ್ ಬಾಬು ಮತ್ತು ಬಾಲಕೃಷ್ಣಗೆ ಜಾಮೀನು ಮಂಜೂರು ಮಾಡಿದ್ದಾರೆ.

ಫೆ. 19 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಗಳಿಗೆ ಸದ್ಯಕ್ಕೆ ಜೈಲು ವಾಸದಿಂದ ಮುಕ್ತಿ ಸಿಕ್ಕಿದೆ. ಪ್ರಮುಖ ಆರೋಪಿ ನಲಪಾಡ್ ಹ್ಯಾರಿಸ್ ಮತ್ತು ಇನ್ನೊಬ್ಬ ಆರೋಪಿ ಅಭಿಷೇಕ್‌ಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಈಗಾಗಲೇ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ದಾಖಲಾಗಿ ತನಿಖೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿದೆ.

Bangalore,Mohammed Haris Nalapad,Friends group,Bail

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ