ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್ ಹತ್ಯೆ

ಚಿಕ್ಕಮಗಳೂರು,ಜೂ.23-ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್(40) ಎಂಬುವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಸಂಬಂಧ ಐದು ಮಂದಿ ವಿರುದ್ದ ಎಫ್‍ಐಆರ್ ದಾಖಲಿಸಲಾಗಿದೆ. ಬಸವನಹಳ್ಳಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಯಸೋಫ್ ಆಝೀ, ಆಸೀಫ್ ಸೇರಿದಂತೆ ಐದು ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಇಂದು ಬೆಳಗ್ಗೆ ಶಾಸಕ ಸಿ.ಟಿ.ರವಿ ಅವರು ಜಿಲ್ಲಾಸ್ಪತ್ರೆ ಬಳಿ ತೆರಳಿ ಅನ್ವರ್ ಅವರ ಸಹೋದರ ಕಬೀರ್ ಹಾಗೂ ಕುಟುಂಬದವರನ್ನು ಸಂತೈಸಿ, ಅನ್ವರ್ ಸ್ನೇಹಿಮಯಿ ವ್ಯಕ್ತಿಯಾಗಿದ್ದರು. ಪಕ್ಷಕ್ಕೆ ಹಾಗೂ ನನಗೆ ವೈಯಕ್ತಿಕವಾಗಿ ಬಹಳ ನೋವನ್ನುಂಟು ಮಾಡಿದೆ ಎಂದು ಕಣ್ಣೀರಿಟ್ಟರು.
ವೈಯಕ್ತಿಕ ದ್ವೇಷ ಏನಿದ್ದರೂ ಎದುರಿಸಿ ಜಯಿಸಬೇಕೆ ವಿನಃ ಹಿಂಬಾಲಿನಿಂದ ಬಂದು ಸಾಯಿಸುವ ಮಟ್ಟಕ್ಕೆ ಇಳಿಯಬಾರದು ಎಂದು ಹೇಳಿದರು.
ಆರೋಪಿಗಳು ಎಷ್ಟೇ ಪ್ರಭಾವಿಯಾಗಿದ್ದರೂ ಕೂಡಲೇ ಅವರನ್ನು ಬಂಧಿಸಬೇಕು. ಅನ್ವರ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶೋಕ ವ್ಯಕ್ತಪಡಿಸಿದರು.
ಬಿಜೆಪಿಯ ಜಿಲ್ಲಾ ವಕ್ತಾರ ಎಚ್.ಡಿ.ತಮ್ಮಯ್ಯ, ವರಸಿದ್ದಿ ವೇಣುಗೋಪಾಲ್ ಮತ್ತಿತರ ಮುಖಂಡರು ಆಸ್ಪತ್ರೆ ಬಳಿ ತೆರಳಿ ಕುಟುಂಬದವರನ್ನು ಸಂತೈಸಿದರು.
ಬಂಧನಕ್ಕೆ ಆಗ್ರಹ: ಅನ್ವರ್ ಹತ್ಯೆ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತ್ರೆಯ ಶವಗಾರದ ಬಳಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಸಂಬಂಧಿಕರು, ಹಿತೈಷಿಗಳು ಜಮಾಯಿಸಿ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿದರು. ಅನ್ವರ್ ಜಾತ್ಯತೀತ ಮನೋಭಾವ ವ್ಯಕ್ತಿಯಾಗಿದ್ದು, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಘಟನೆ ಹಿನ್ನೆಲೆ: ನಗರದ ಗೌರಿ ಕಾಲುವೆ ಬಡಾವಣೆಯ ಗುಡ್ ಮಾರ್ನಿಂಗ್ ಶಾಪ್ ಹಿಂಭಾಗದ ರಸ್ತೆಯಲ್ಲಿ ರಾತ್ರಿ 9.35ರ ಸಮಯದಲ್ಲಿ ಕಾರಿನಿಂದ ಮೊಹಮ್ಮದ್ ಅನ್ವರ್ ಇಳಿಯುತ್ತಿದ್ದಂತೆ ಹೊಂಚು ಹಾಕಿ ಕುಳಿತಿದ್ದ ಹಂತಕರು ತಲ್ವಾರ್‍ನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಇಬ್ಬರು ದುಷ್ಕರ್ಮಿಗಳು ಬೈಕ್‍ನಲ್ಲಿ ಬಂದು ಅನ್ವರ್ ಅವರ ಹೊಟ್ಟೆ, ಎದೆ, ತಲೆ ಇನ್ನಿತರ ಭಾಗಗಳಿಗೆ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಕುಸಿದು ಬಿದ್ದ ಇವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾರೆ.
ಹೆಚ್ಚುವರಿ ಎಸ್ಪಿ ಗೀತಾ ಅವರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಶವವನ್ನು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಘಟನೆಗೆ ಕಾರಣ: ವೈಯಕ್ತಿಕ ವಿಚಾರವಾಗಿ ಒಂದೇ ಕೋಮಿನವರ ವಿರುದ್ಧ ಹಲವಾರು ವರ್ಷಗಳಿಂದ ದ್ವೇಷವಿತ್ತು ಎನ್ನಲಾಗಿದೆ. ಕಳೆದ ಎಂಟು ವರ್ಷಗಳ ಹಿಂದೆ ವೈಯಕ್ತಿಕ ದ್ವೇಷದಿಂದ ಅನ್ವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆದು, ಕೋಟ್ ಮೆಟ್ಟಿಲೇರಿ ಆರೋಪಿಗಳಿಗೆ ಶಿಕ್ಷೆಯೂ ಆಗಿತ್ತು.
ಅಂದು ಗಂಭೀರ ಗಾಯಗೊಂಡಿದ್ದ ಅನ್ವರ್ ಸಾವು-ಬದುಕಿನ ನಡುವೆ ಹೋರಾಟ ಮಾಡಿ ಚೇತರಿಸಿಕೊಂಡಿದ್ದರು. ತದನಂತರ ಬಿಜೆಪಿ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ