
ಬೆಂಗಳೂರು, ಜೂ.23- ರಾಜ್ಯ ಸಮ್ಮಿಶ್ರ ಸರ್ಕಾರ ಬಜೆಟ್ ಪೂರ್ವ ಸಿದ್ದತಾ ಸಭೆಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪ್ರತ್ಯೇಕವಾಗಿ ನಡೆಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಕ್ತಿಭವನದಲ್ಲಿ ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಿದರೆ, ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ವಿಧಾನಸೌಧದಲ್ಲಿ ಬಜೆಟ್‍ಗೆ ಸಂಬಂಧಿಸಿದಂತೆ ಸಭೆ ನಡೆಸಿದರು.
ಮುಖ್ಯಮಂತ್ರಿ ಅವರು ಮಹಿಳೆ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಅರಣ್ಯ, ಪರಿಸರ, ಸಾರ್ವಜನಿಕ ಉದ್ದಿಮೆ, ಇಂಧನ, ಯೋಜನೆ,ಜವಳಿ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾವಾರ ಸಭೆ ನಡೆಸಿದರು.
ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿದಂತೆ ಹಣಕಾಸು ಇಲಾಖೆ ಅಧಿಕಾರಿಗಳು ಆಯಾ ಇಲಾಖೆಗೆ ಸಂಬಂಧಿಸಿದ ಸಚಿವರು ಸಭೆಯಲ್ಲಿ ಪಾಲ್ಗೊಂಡು ಜುಲೈ5ರಂದು ಮಂಡನೆಯಾಗಲಿರುವ ಹೊಸ ಬಜೆಟ್‍ನಲ್ಲಿ ತಮ್ಮ ತಮ್ಮ ಇಲಾಖೆಗಳ ಆದ್ಯತೆಗಳ ಬಗ್ಗೆ ಚರ್ಚಿಸಿದರು.
ವಿಧಾನಸೌಧದಲ್ಲಿ ಗೃಹ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು, ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನೂತನ ಬಜೆಟ್‍ನಲ್ಲಿ ಪ್ರಕಟವಾಗಿರಬೇಕಾಗಿರುವ ಯೋಜನೆ, ಕಾರ್ಯಕ್ರಮಗಳು, ಹಳೆ ಯೋಜನೆಗಳ ಮುಂದುವರಿಕೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.