ಬೆಂಗಳೂರು, ಜೂ.23- ಜಿಲ್ಲಾವಾರು ಕುಡಿಯುವ ನೀರಿನ ವ್ಯವಸ್ಥೆ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಪ್ರಗತಿ ಸೇರಿದಂತೆ ಇನ್ನಿತರೆ ಮಹತ್ವದ ವಿಚಾರಗಳ ಕುರಿತು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಅವರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮುಂದಿನ ತಿಂಗಳು ಮಂಡಿಸಲಾಗುವ ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಜಿಲ್ಲಾವಾರು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಶೌಚಾಲಯದ ನಿರ್ವಹಣೆ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಹಾಗೂ ನಿರ್ವಹಣೆ ಸೇರಿದಂತೆ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇಲಾಖೆಯ ಪ್ರಧಾನಕಾರ್ಯದರ್ಶಿ ನಾಗಲಾಂಬಿಕಾ ದೇವಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.