ಮಹಾರಾಷ್ಟ್ರ: ಇಂದಿನಿಂದಲೇ ಪ್ಲಾಸ್ಟಿಕ್ ನಿಷೇಧ, ನಿಯಮ ಮೀರಿದರೆ 25,000 ರೂ ದಂಡದ ಜತೆ 3 ತಿಂಗಳು ಜೈಲು !

ಮುಂಬೈ: ಮಹಾರಾಷ್ಟ್ರದಲ್ಲಿ ಶನಿವಾರದಿಂದಲೇ ಜಾರಿಗೆ ಬರುವಂತೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು, ರಾಜ್ಯದಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಪ್ಲಾಸ್ಚಿಕ್ ವಸ್ತುಗಳ ಬಳಕೆ ಮತ್ತು ಮಾರಾಟ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಹೇಳಿದ್ದಾರೆ. ಅಂತೆಯೇ ಮೊದಲ ಬಾರಿ ತಪ್ಪು ಮಾಡಿ ಸಿಕ್ಕಿಬಿದ್ದರೆ 5 ಸಾವಿರ ರೂ, ಎರಡನೇ ಬಾರಿ ತಪ್ಪು ಮಾಡಿದರೆ 10 ಸಾವಿರ ರೂ. ದಂಡ ಮತ್ತು ಮೂರನೇ ಬಾರಿಗೆ ತಪ್ಪು ಮಾಡಿ ಸಿಕ್ಕಿಬಿದ್ದರೆ 25 ಸಾವಿರ ರೂ ದಂಡ ಮತ್ತು 3 ತಿಂಗಳವರೆಗಿನ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ ಎಂದು ಮಾಹಿತಿ ನೀಡಿದ್ದಾರೆ.

ಸ್ಟಾಕ್ ಕ್ಲಿಯರೆನ್ಸ್ ಗೆ ಮೂರು ತಿಂಗಳ ಗಡುವು

ಇನ್ನು ಮಹಾರಾಷ್ಟ್ರದಲ್ಲಿ ಪ್ರಸ್ತುತ ಇರುವ ಪ್ಲಾಸ್ಟಿಕ್ ಕವರ್ ಮತ್ತು ಇತರೆ ವಸ್ತುಗಳ ಮಾರಾಟಗಾರರಿಗೆ ದೇವೇಂದ್ರ ಫಡ್ನವಿಸ್ ಸರ್ಕಾರ ದಾಸ್ತಾನು ಖಾಲಿ ಮಾಡಲು ಅಂತಿಮ ಗಡುವು ನೀಡಿದ್ದು,  ಮೂರು ತಿಂಗಳೊಳಗೆ ದಾಸ್ತುನು ಖಾಲಿ ಮಾಡುವಂತೆ ಸೂಚಿಸಿದೆ. ಪ್ರಮುಖವಾಗಿ ಗುಜರಾತ್ ನಿಂದ ಪ್ಸಾಸ್ಟಿಕ್ ಕವರ್ ಗಳು ಮಹಾರಾಷ್ಟ್ರಕ್ಕೆ ಆಗಮಿಸುತ್ತಿದ್ದು, ಗಡಿಯಲ್ಲೇ ಇವುಗಳನ್ನು ಪರಿಶೀಲನೆ ಮಾಡುವಂತೆ ಅಧಿಕಾರಿಗಳಿ ಸೂಚನೆ ನೀಡಲಾಗಿದೆ.

ಕಳೆದ ಮಾರ್ಚ್ 23ರಂದು ಮಹಾರಾಷ್ಟ್ಕ ಸರ್ಕಾರ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆಗೆ ನಿಷೇಧ ಹೇರಿತ್ತು. ಇದೀಗ ಅದರ ಬಳಕೆ ಮೇಲೂ ನಿಷೇಧ ಹೇರುವ ಮೂಲಕ ಅಕ್ರಮ ಪ್ಲಾಸ್ಟಿಕ್ ತಯಾರಿಕರಿಗೆ ಬಿಸಿ ಮುಟ್ಟಿಸಿದೆ.

ಸರ್ಕಾರದ ಕ್ರಮಕ್ಕೆ ಬೆಂಬಲ ನೀಡುವಂತೆ ಜನರಿಗೆ ಶಿವಸೇನೆ ಕರೆ

ಇನ್ನು ಎನ್ ಡಿಎ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಶಿವಸೇನೆ ಪ್ಲಾಸ್ಚಿಕ್ ನಿಷೇಧ ವಿಚಾರವಾಗಿ ಸಿಎಂ ದೇವೇಂದ್ರ ಫಡ್ನವಿಸ್ ಅವರ ಬೆನ್ನಿಗೆ ನಿಂತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆಯ ಆದಿತ್ಯಾ ಠಾಕ್ರೆ ರಾಜ್ಯಸರ್ಕಾರದ ಕ್ರಮ ಉತ್ತಮವಾಗಿದ್ದು, ಸರ್ಕಾರದ ಕ್ರಮಕ್ಕೆ ಬೆಂಬಲ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಅಂತೆಯೇ ಸರ್ಕಾರದ ಈ ನಿರ್ಧಾರ ವಿಶ್ವಕ್ಕೆ ಮಾದರಿಯಾಗಲಿದೆ ಎಂದು ಶ್ವಾಘಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ