
ಮಳವಳ್ಳಿ, ಜೂ.23- ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ನಡೆದಿದೆ. ಮೈಸೂರು ಜಿಲ್ಲೆ ತುರುಗನೂರು ಯಾಚನಹಳ್ಳಿ ಗ್ರಾಮದ ನಿವಾಸಿ ಚನ್ನಶಟ್ಟಿ (41) ಮೃತ ವ್ಯಕ್ತಿ.
ಕನಕಪುರ ತಾಲ್ಲೂಕಿನ ಕಬ್ಬಾಳಮ್ಮ ದೇವಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂದೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.