ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಜೆಡಿಎಸ್ ಜೊತೆ ಕೈಜೋಡಿಸಲು ಕಾಂಗ್ರೆಸ್ ನಿರ್ಧಾರ

ಮೈಸೂರು: ಜೂ-24:ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆ. ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಜೆಡಿಎಸ್ ಜೊತೆ ಕೈಜೋಡಿಸಲು ಕಾಂಗ್ರೆಸ್ ಮುದಾಗಿದೆ.

ಈ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ರಣತಂತ್ರ ಹೆಣೆಯುತ್ತಿರುವ ಕಾಂಗ್ರೆಸ್. ಈ ಸಂಬಂಧ ಸಂಸದ ಧ್ರುವನಾರಾಯಣ್ ನೇತೃತ್ವದಲ್ಲಿ ಸಭೆ ನಡೆಸಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯ್ತಿ ಸದಸ್ಯರು. ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಕೂಡ ಸಭೆಯಲ್ಲಿ ಭಾಗಿದ್ದರು.

ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಜೆಡಿಎಸ್ ಜೊತೆ ದೋಸ್ತಿ ಮಾಡಿಕೊಳ್ಳಲು ಒಕ್ಕೊರಲಿನಿಂದ ಕಾಂಗ್ರೆಸ್ ಜಿಲ್ಲಾ ಪಂಚಾಯ್ತಿ ಸದಸ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಚಿವ ಸಾ.ರಾ ಮಹೇಶ್ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿರುವ ಧ್ರುವನಾರಾಯಣ್.
ಒಟ್ಟು 49 ಸದಸ್ಯ ಬಲದ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡಪಕ್ಷವಾಗಿದೆ.

Mysore,congres-jds,jillapanchayat election

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ