ಯದಾದ್ರಿ/ಅಮರಾವತಿ, ಜೂ.24-ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಂಭವಿಸಿದ ಎರಡು ಭೀಕರ ಅಪಘಾತಗಳಲ್ಲಿ 25ಕ್ಕೂ ಹೆಚ್ಚು ಮಂದಿ ಮೃತಪಟ್ಟು, 19 ಜನರು ತೀವ್ರ ಗಾಯಗೊಂಡಿದ್ದಾರೆ.
ತೆಲಂಗಾಣದ ಯದಾದ್ರಿ ಜಿಲ್ಲೆಯ ನಂದನಂ ಗ್ರಾಮದಲ್ಲಿ ಇಂದು ಬೆಳಗ್ಗೆ ಟ್ರ್ಯಾಕ್ಟರ್ ಪಲ್ಟಿಯಾಗಿ 16 ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾದ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇತರ 15 ಮಂದಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಈ ಭೀಕರ ದುರ್ಘಟನೆ ಸಂಭವಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಟೋ-ಬಸ್ ಡಿಕ್ಕಿ; 9 ಸಾವು: ಆಟೋ ರಿP್ಷÁ ಮತ್ತು ಬಸ್ ನಡುವೆ ಡಿಕ್ಕಿಯಾಗಿ ಒಂಭತ್ತು ಮಂದಿ ಮೃತಪಟ್ಟು, ಇತರ ನಾಲ್ವರು ಗಾಯಗೊಂಡ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸೋಮಯಾಜುಲಪಲ್ಲಿ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಕರ್ನೂಲು-ನಂದ್ಯಾಲ ಮುಖ್ಯರಸ್ತೆಯಲ್ಲಿ ಆಂಧ್ರಪ್ರದೇಶ ರಾಜ್ಯ ಸಾರಿಗೆ ಸಂಸ್ಥೆ(ಎಪಿಆರ್ಟಿಸಿ) ಬಸ್ ಆಟೋಗೆ ಡಿಕ್ಕಿ ಹೊಡೆದು ಈ ಭೀಕರ ದುರಂತ ಸಂಭವಿಸಿತು ಎಂದು ಪೆÇಲೀಸರು ತಿಳಿಸಿದ್ದಾರೆ.
ಏಳು ಆಸನಗಳ ಸಾಮಥ್ರ್ಯದ ದೊಡ್ಡ ಆಟೋದಲ್ಲಿ 13 ಜನರು ಕಿಕ್ಕಿರಿದು ಪ್ರಯಾಣಿಸುತ್ತಿದ್ದರು. ಈ ಅಪಘಾತದಲ್ಲಿ ಏಳು ಜನರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಯಗೊಂಡ ಆಟೋ ಚಾಲಕ ಸೇರಿದಂತೆ ನಾಲ್ವರ ಸ್ಥಿತಿ ಗಂಭೀರವಾಗಿದೆ.