ಹಜ್ ಭವನಕ್ಕೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೆಸರಿಡುವುದು ಸೂಕ್ತ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಜೂ-24; ರಾಜ್ಯದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಘರ್ ಎಂಬ ಹೆಸರಿಡುವ ಬದಲು ಮಾಜಿ ರಾಷ್ಟ್ರಪತಿ ದಿವಂಗತ ಎಪಿಜೆ ಅಬ್ದುಲ್ ಕಲಾಂ ಹೆಸರಿಡಲಿ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಹಜ್ ಭವನಕ್ಕೆ ಟಿಪು ಸುಲ್ತಾನ್ ಹೆಸರಿಡುವಂತೆ ಪ್ರಸ್ತಾವನೆ ಬಂದಿರುವ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಈ ಸಂಬಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಮಾತನಾಡುವುದಾಗಿ ಹೇಳಿದ್ದರು ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಹಜ್ ಭವನಕ್ಕೆ ಎಪಿಜೆ ಅಬ್ದುಲ್ ಕಲಾಂ ಹೆಸರಿಡುವುದು ಸೂಕ್ತ ಎಂದು ಹೇಳಿದ್ದಾರೆ.

ಹಜ್‌ ಭವನಕ್ಕೆ ಟಿಪ್ಪು ಸುಲ್ತಾನ್‌ ಹೆಸರು ನಾಮಕರಣ ಮಾಡುವ ಪ್ರಸ್ತಾವನೆ ಬಂದಿದೆ. ಈ ಸಂಬಂಧ ಸಿಎಂ ಕುಮಾರ ಸ್ವಾಮಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸಬೇಕು ಎಂದು ಜಮೀರ್ ಹೇಳಿದ್ದರು. ಇದೊಂದು ಸ್ವತಂತ್ರ್ಯ ಸಂಸ್ಥೆಯಾಗಿದ್ದು, ಟಿಪ್ಪು ಹೆಸರಿಡಬೇಕೆಂಬ ಪ್ರಸ್ತಾವನೆ ಬಂದಿದೆ. ಟಿಪ್ಪು ಸುಲ್ತಾನ್ ಘರ್ ಎಂದು ಹೆಸರಿಡುವುದರಿಂದ ಯಾವುದೇ ತಪ್ಪಿಲ್ಲ ಎಂದು ಜಮೀರ್ ಹೇಳಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿದೆ.

APJ Abdul Kalam,Name,Haj Bhavan, BS Yedyurappa

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ