ಮೈತ್ರಿ ಸರ್ಕಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಂಪರ್ ಆಫರ್!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈತ್ರಿ ಸರ್ಕಾರದಲ್ಲಿ ಬಂಪರ್ ಆಫರ್ ಬಂದಿದ್ದು, ಈ ಆಫರ್ ಅನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯಗೆ ಮೈತ್ರಿ ಸರ್ಕಾರದಲ್ಲಿ ಸ್ಥಾನಮಾನ ನೀಡಲು ಸಲುವಾಗಿ ಕ್ಯಾಬಿನೆಟ್ ದರ್ಜೆ ಸ್ಥಾನಮಾನವನ್ನು ನೀಡಲು ಸಿಎಂ ಹೆಚ್‍ಡಿ ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೋಮವಾರ ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಸರ್ಕಾರದಿಂದಲೇ ಸಮನ್ವಯ ಸಮಿತಿ ರಚಿಸಿ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಆದ್ದರಿಂದ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ನಿರ್ಧಾರ ಮಾಡಿದ್ದಾರೆ.

ಈ ಸಮಸ್ವಯ ಸಮಿತಿಯನ್ನು ಮೈತ್ರಿ ಸರ್ಕಾರಕ್ಕೆ ಸಲಹೆ ಕೊಡಲು ರಚನೆ ಮಾಡಲಾಗುತ್ತಿದೆ. ಆದ್ದರಿಂದ ಈ ಸಮನ್ವಯ ಸಮಿತಿ ರಚಿಸಿ ಆದೇಶ ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ