ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ನಾಲ್ಕು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ

ನವದೆಹಲಿ,ಜೂ.24- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ನಾಲ್ಕು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗಳು ಲಭ್ಯವಾಗಿದೆ. ನಿಗಮವು ಅನುಷ್ಠಾನಗೊಳಿಸಿರುವ ಈ ಕೆಳಕಂಡ ಉತ್ಕøಷ್ಟ ಯೋಜನೆಗಳನ್ನು ಗುರುತಿಸಿ ರಾಷ್ಟ್ರೀಯ ಸ್ಟೇಟ್ ಆಫ್ ಗೌರ್ನೆನ್ಸ್ -ಆರ್ಡರ್ ಆಫ್ ಮೆಂಟ್ ಪ್ರಶಸ್ತಿಗಳನ್ನು ನವದೆಹಲಿಯಲ್ಲಿ ಜರುಗಿದ 52ನೇ ರಾಷ್ಟ್ರೀಯ ಶೃಂಗಸಭೆಯಲ್ಲಿ ಕೆಎಸ್‍ಆರ್‍ಟಿಸಿಗೆ ನೀಡಲಾಯಿತು. ಕಾರ್ಯ ಸ್ಥಳದಲ್ಲಿ ಅನುಷ್ಠಾನಗೊಳಿಸಿರುವ ಆರೋಗ್ಯಕರ ಉಪಕ್ರಮಗಳು, ಅವತಾರ್, ಸಾರಿಗೆ ಕ್ಷೇತ್ರದಲ್ಲಿ ಮಾಹಿತಿ ತಂತ್ರಜ್ಞಾನಗಳ ಅನುಷ್ಠಾನ, ವೆಹಿಕಲ್ ಟ್ರ್ಯಾಕಿಂಗ್ ಮತ್ತು ಮಾನಿಟರಿಂಗ್ ವ್ಯವಸೆ(ವಿಟಿಎಂಎಸ್)ಗಾಗಿ ಈ ಪ್ರಶಸ್ತಿಗಳು ಲಭ್ಯವಾಗಿವೆ.
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾರ್ವಜನಿಕ ಆಡಳಿತದಲ್ಲಿನ ಉತ್ತಮ ಪ್ರಯತ್ನಗಳನ್ನು ಗುರುತಿಸುವ ಮತ್ತು ಪರಿಣಾಮಕಾರಿಯಾಗಿ ಆಡಳಿತದ ಮಾದರಿ ಯೋಜನೆಗಳನ್ನು ಪುರಸ್ಕರಿಸುವ ವೇದಿಕೆಯಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ