
ತುಮಕೂರು,ಜೂ.24- ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕ್ಯಾತಸಂದ್ರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯಶೋಧ(34) ಮೃತಪಟ್ಟ ಮಹಿಳೆ. ಯಶೋಧ ಅವರು ನಗರದಿಂದ ಕ್ಯಾತಸಂದ್ರ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 47ರಲ್ಲಿ ಅತಿವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಯಶೋಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಕೂಡಲೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಕ್ಯಾತಸಂದ್ರ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.