ವಿದ್ಯುತ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರ ಸಾವು

ಕೊಪ್ಪಳ,ಜೂ.24- ವಿದ್ಯುತ್ ಕಾಮಗಾರಿ ವೇಳೆ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಗಂಗಾವತಿ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ವೆಂಕಟಗಿರಿ ಗ್ರಾಮದ ನಿವಾಸಿಗಳಾದ ಹನುಮಂತಪ್ಪ(32), ಮೆಹಬೂಬ್ ಸಾಬ್(42) ಮೃತಪಟ್ಟ ದುರ್ದೈವಿಗಳು. ತಾಲ್ಲೂಕಿನ ಹಿರೇಬೆಣಕಲ್ ಗ್ರಾಮದ ಬಳಿ ವಿದ್ಯುತ್ ತಂತಿ ಅಳವಡಿಸುವ ಕಾಮಗಾರಿ ನಡೆಸಲಾಗುತ್ತಿತ್ತು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಈ ಇಬ್ಬರು ನತದೃಷ್ಟರು ಮೃತಪಟ್ಟರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮಗಾರಿ ನಿರ್ವಹಿಸುವ ವೇಳೆ ವಿದ್ಯುತ್‍ಸಂಪರ್ಕ ಕಡಿತಗೊಳಿಸಿರಲಿಲ್ಲ. ಹಾಗಾಗಿ ಈ ಅವಘಡಕ್ಕೆ ಕಾರಣವಾಗಿದೆ ಎಂದು ಮೃತರ ಕುಟುಂಬದವರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ. ಮೃತ ಕುಟುಂಬ ವರ್ಗದವರಿಗೆ ಪರಿಹಾರ ನೀಡಬೇಕು ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಇಲಾಖೆಯೇ ಭರಿಸಬೇಕೆಂದು ಕುಟುಂಬ ವರ್ಗದವರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ. ಗ್ರಾಮಾಂತರ ಠಾಣೆ ಪೆÇಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ