ಜುಲೈ 18 ರಿಂದ ಆಗಸ್ಟ್ 10 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ

ಹೊಸದಿಲ್ಲಿ: ಜುಲೈ.18 ರಿಂದ ಆಗಸ್ಟ್ 10 ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವ ಸಂಪುಟ ಸಮಿತಿ (ಸಿಸಿಪಿಎ) ಮುಂದಿರುವ ಪ್ರಸ್ತಾವನೆ ಪ್ರಕಾರ ಸಂಸತ್ ಮುಂಗಾರು ಅಧಿವೇಶನ ಜುಲೈ18 ರಿಂದ ಆರಂಭವಾಗುವ ಸಾಧ್ಯತೆಗಳಿದ್ದು, ಆಗಸ್ಟ್ 10ರಂದು ಅಧಿವೇಶನ ಮುಕ್ತಾಯವಾಗಲಿದೆ ಎಂದು ವರದಿಯಾಗಿದೆ. 

ಮುಂಗಾರು ಅಧಿವೇಶನ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜಧಾನಿ ನವದೆಹಲಿಯಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ಅಧಿವೇಶನಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಅಧಿವೇಶನ ಆರಂಭಗೊಳ್ಳಲಿದ್ದು, 18 ದಿನಗಳ ಕಾಲ ಅಧಿವೇಶನವನ್ನು ನಡೆಸಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಹೇಳಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ