ಬೆಂಗಳೂರು:ಜೂ-25: ಸರ್ಕಾರಿ ಕೃಷಿ ಖಾಲೆಜುಗಳ ಖಾಸಗೀಕರಣಕ್ಕೆ ವಿರೋಧ ಮತ್ತು ಯುಜಿಸಿ ಮಾನ್ಯತೆ ಹೊಂದಿರದ ಖಾಸಗಿ ಕೃಷಿ ಕಾಲೇಜುಗಳನ್ನ ರದ್ದು ಪಡಿಸುವಂತೆ ಸರ್ಕಾರಿ ಕೃಷಿ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಈಗ ಸರ್ಕಾರಿ ಕೃಷಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ಖಂಡಿಸಿ ಖಾಸಗಿ ಕೃಷಿ ವಿವಿ ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ರೈ ಟೆಕ್ನಾಲಜಿ ಯೂನಿವರ್ಸಿಟಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಖಾಸಗಿ ಕೃಷಿ ವಿವಿಗಳನ್ನ ರದ್ದುಪಡಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಂತೆ ಒತ್ತಾಯಿಸಿದರು.
ಕಾಲೇಜಿನ ನೂರಾರು ವಿದ್ಯಾರ್ಥಿಗಳು ತರಗತಿಗಳನ್ನ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.ಸರ್ಕಾರದ ವಿರುದ್ದ ದಿಕ್ಕಾರಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Rai Technology University,students,protest