ಕಲಬುರಗಿ,ಜೂ.25- ದುಷ್ಕರ್ಮಿಗಳ ಗುಂಪೆÇಂದು ಏಕಾಏಕಿ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರೋಜ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ ನಗರದ ಹಾಗರಗ ಕ್ರಾಸ್ ನಿವಸಿ ಮೌಸೀನ್(28) ಕೊಲೆಯಾದ ಯುವಕ. ನಗರದ ನೂರ್ಬಾಗ್ ಬಳಿ ತಡರಾತ್ರಿ ಮೌಸೀನ್ ಹೋಗುತ್ತಿದ್ದಾಗ ದುಷ್ಕರ್ಮಿಗಳು ಈತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ರೋಜ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ.