ಹಾಸನ:ಜೂ-26: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸಚಿವರಾಗಿ ಹಾಸನ ಜಿಲ್ಲೆಯಲ್ಲಿ ಮೊದಲ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯ ವಿವಿಧೆಡೆ ಪರಿಶೀಲನೆ ನಡೆಸಿದ ಸಚಿವರು ರಾಜ್ಯದ ಎಲ್ಲಾ ಬಸ್ ನಿಲ್ದಾಣ ಗಳಲ್ಲೂ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಕೆಎಸ್ಆರ್ ಟಿಸಿ ಸಿಬ್ಬಂದಿ ಗಳನ್ನು ರಾಜ್ಯ ಸರ್ಕಾರಿ ನೌಕರ ರಾಗಿ ಪರಿಗಣನೆ ಪ್ರಸ್ತಾಪ ಇಲ್ಲ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಮುಂದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರೈಲ್ವೆ ನಿಲ್ದಾಣ ಮಾದರಿಯಲ್ಲೇ ಪ್ರತಿ ಬಸ್ ನಿಲ್ದಾಣದಲ್ಲೂ ಉಪಾಹಾರ ಮಂದಿರ ತೆರೆಯೋ ಚಿಂತನೆ ಇದ್ದು, ಈ ಬಗ್ಗೆಅಧಿಕಾರಿಗಳೊಂದಿಗೆ ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನು ವಿದ್ಯುತ್ ಶಕ್ತಿ ಉತ್ಪಾದನೆಗೆ ಪ್ರತಿ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಲಾರ್ ವ್ಯವಸ್ಥೆ ಅಳವಡಿಸಲು ನಿರ್ಧರಿಸಲಾಗಿದ್ದು, ಇದರಿಂದ ಸಂಸ್ಥೆಯ ಆರ್ಥಿಕ ಮಟ್ಟ ಹೆಚ್ಚಿಸಲು ಹೊಸ ಯೋಜನೆ ರೂಪಿಸಲು ಚಿಂತನೆ ನಡೆದಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಸಚಿವರು ತಾವು ಜಿಲ್ಲೆಗೆ ತೆರಳುತ್ತಿದ್ದ ಮಾರ್ಗದಲ್ಲೇ ಕಾರು ನಿಲ್ಲಿಸಿ ಬಸ್ಗಳ ತಪಾಸಣೆ ನಡೆಸಿ ಪ್ರಯಾಣಿಕರ ಕುಂದು ಕೊರತೆಯನ್ನು ಆಲಿಸಿದರು.
ಹಾಸನ ಜಿಲ್ಲೆಯ ಗಡಿ ಹಿರೀಸಾವೆ ಬಳಿ ಬೆಂಗಳೂರು-ಕುಂದಾಪುರ ಮಾರ್ಗದ ಐರಾವತ ಬಸ್ಗಳ ಪರಿಶೀಲನೆ ನಡೆಸಿದರು. ಬೆಂಗಳೂರಿನಿಂದ ಚನ್ನರಾಯಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಅನಿರೀಕ್ಷಿತ ತಪಾಸಣೆ ಕೈಗೊಂಡರು.
ಈ ವೇಳೆ ಪ್ರಯಾಣಿಕರು ಐರಾವತ ಬಸ್ನಲ್ಲಿ ಕಿಟಕಿಯ ಪರದೆ ಇಲ್ಲದ್ದನ್ನು ಸಚಿವರ ಗಮನಕ್ಕೆ ತಂದರು. ಅಧಿಕಾರಿಗಳೊಂದಿಗೆ ಚರ್ಚಿಸಿ ಅವ್ಯವಸ್ಥೆ ಸರಿಪಡಿಸುವುದಾಗಿ ಹೇಳಿದರು. ಅಲ್ಲದೆ, ಅಧಿಕಾರಿಗಳಿಗೆ ದೂರವಾಣಿ ಮೂಲಕ ತರಾಟೆ ತೆಗೆದುಕೊಂಡರು.
Hasana,Transport Minister, D.C Tammanna