ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿತ

????????????????????????????????????

ಮಂಗಳೂರು, ಜೂ.26- ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗೆ ಗುಡ್ಡ ಕುಸಿದಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಮಿತ್ತಕೋಡಿ ಬಳಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ವಾಹನಗಳು ನಿಂತಲ್ಲೇ ನಿಂತಿದ್ದು ಕಂಡುಬಂತು. ಗುಡ್ಡ ಕುಸಿತದಿಂದಾಗಿ ಮುಡಿಪು-ಬಿಸಿಕೋಡ್ ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಸುದ್ದಿ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದ್ದು, ಇವರೊಂದಿಗೆ ಸ್ಥಳೀಯರೂ ಸಹ ಸೇರಿಕೊಂಡು ಗುಡ್ಡವನ್ನು ತೆರವುಗೊಳಿಸುವಲ್ಲಿ ನಿರತರಾಗಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ