ಲಾರಿ ಕಾರಿಗೆ ಡಿಕ್ಕಿ ಮೂವರ ಸಾವು

ಕಾರವಾರ, ಜೂ.26- ಅತಿ ವೇಗವಾಗಿ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲ್ಲಾಪುರ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿನಾಯಕ ಹೆಗಡೆ (40), ಅರ್ಚನಾ (35), ಶ್ರಾವಣಿ (3) ಎಂದು ಗುರುತಿಸಲಾಗಿದೆ. ಮತ್ತೊಂದು ಮಗು ಯಶಸ್ವಿನಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಕಾರಿನಲ್ಲಿ ಒಂದೇ ಕುಟುಂಬದ ಈ ನಾಲ್ವರು ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದಾಗ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಚಿಕ್ಕಮಾವಳ್ಳಿ ಗ್ರಾಮದ ಸಮೀಪ ಅತಿ ವೇಗವಾಗಿ ಮುನ್ನುಗ್ಗಿದ ಲಾರಿ ಇವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ದಂಪತಿ ಹಾಗೂ ಮಗು ಎಂದು ಹೇಳಲಾಗುತ್ತಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಯಲ್ಲಾಪುರ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ