ವಾರಣಾಸಿ: ಜೂ-26: ಇಂದು ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿಯೇ 1975ರ ತುರ್ತು ಪರಿಸ್ಥಿತಿಗಿಂದಲೂ ಹೆಚ್ಚು ಅಪಾಯಕಾರಿಯಾದದ್ದು ಎಂದು ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಹೇಳಿದ್ದಾರೆ.
1975ರಲ್ಲಿ ಇಂದಿರಾ ಗಾಂಧಿ ಸರ್ಕಾರ ಘೋಷಣೆಮಾಡಿದ್ದ ತುರ್ತು ಪರಿಸ್ಥಿತಿಗಿಂತಲೂ ಇಂದು ದೇಶದಲ್ಲಿರುವ ಅಘೋಷಿತ ತುರ್ತು ಪರಿಸ್ಥಿತಿಯೇ ಅತ್ಯಂತ ಹೆಚ್ಚು ಅಪಾಯಕಾರಿಯಾಗಿದೆ. ದೇಶದಲ್ಲಿಂದು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನವನ್ನು ಹಾಸ್ಯಸ್ಪದವನ್ನಾಗಿ ಮಾಡಲಾಗಿದೆ. ಸರ್ಕಾರದ ಎಲ್ಲಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಎಲ್ಲವೂ ಬಿಜೆಪಿ ನಿರ್ದೇಶನದಂತೆಯೇ ನಡೆಯುತ್ತಿದೆ. ಇತರರ ವಿರುದ್ಧ ತನಿಖೆಗೆ ಆದೇಶಿಸುವ ಸರ್ಕಾರ, ಸರ್ಕಾರದಲ್ಲಿ ಉನ್ನತ ಮಟ್ಟದಲ್ಲಿರುವ ಅಧಿಕಾರಿಗಳ ವಿರುದ್ಧ ಮಾತ್ರ ತನಿಖೆಗೆ ಆದೇಶಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿರ್ದೇಶಕರಾಗಿರುವ ಅಹಮದಾಬಾದ್ ಜಿಲ್ಲಾ ಸಹಕಾರ ಬ್ಯಾಂಕಿನಲ್ಲಿ ನೋಟ್ ಬ್ಯಾನ್ ಬಳಿಕ (ಎಡಿಸಿಬಿ) ರೂ.745.59 ಕೋಟಿ ಮೌಲ್ಯದ ಹಳೆ ನೋಟು ಠೇವಣಿಯಾಗಿದ್ದು, ಈ ಬಗ್ಗೆ ಸರ್ಕಾರ ಈವರೆಗೂ ಯಾವುದೇ ರೀತಿಯ ತನಿಖೆಗೆ ಆದೇಶಿಸಿಲ್ಲ ಎಂದು ಹೇಳಿದ್ದಾರೆ.
ಸರ್ಕಾರಿ ಸಂಸ್ಥೆಗಳಾದ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ, ಆದಾಯ ತೆರಿಗೆ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಗುಡುಗಿದರು.
ಇದೇ ವೇಳೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಮಾಡಿದ್ದ ಆರೋಪವನ್ನು ಪ್ರಸ್ತಾಪಿಸಿರುವ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ಸರಿಯಿಲ್ಲ ಎಂದು ನ್ಯಾಯಮೂರ್ತಿಗಳೇ ಹೇಳಿದ್ದರು ಎಂದಿದ್ದಾರೆ. ಇಂದಿನ ಅಘೋಷಿತ ತುರ್ತು ಪರಿಸ್ಥಿತಿ ವಿರುದ್ದ ಜನತೆ ಬೀದಿಗಿಳು ಪ್ರತಿಭಟನೆ ನಡೆಸಬೇಕಾದ ಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ
Undeclared Emergency in the country,more dangerous than the one in 1975, Yashwant Sinha