ಬೆಂಗಳೂರು, ಜೂ.26- ಹಜ್‍ಘರ್‍ಗೆ ಟಿಪ್ಪುಸುಲ್ತಾನ್ ಹೆಸರಿಡುವ ಬಗ್ಗೆ ಸಚಿವ ಜಮೀರ್ ಅಹಮ್ಮದ್ ಖಾನ್ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದನ್ನು ಪರಿಶೀಲಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅಭಿಪ್ರಾಯ ಹೇಳಲು ಅವಕಾಶವಿದೆ. ಅಭಿಪ್ರಾಯ ಹೇಳಿದಾಕ್ಷಣ ತೀರ್ಮಾನ ಆಗುವುದಿಲ್ಲ. ವಸತಿ ಇಲಾಖೆಯಲ್ಲಿ ಹಿಂದೆ ಘೋಷಿಸಿದ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆಸಕ್ತಿ ನೀಡಲಾಗುತ್ತದೆ. ಹೊಸ ಘೋಷಣೆಗಳನ್ನು ಘೋಷಿಸುವುದಕ್ಕಿಂತ ಹಿಂದಿನ ಯೋಜನೆಗಳಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದರು.
ಸಾಲ ಮನ್ನಾ ಮತ್ತು ಹೊಸ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಆ ಕುರಿತು ಸಮನ್ವಯ ಸಮಿತಿಯಲ್ಲಿ ಚರ್ಚಿಸುವುದಾಗಿ ಖಾದರ್ ಹೇಳಿದರು.