ರಸ್ತೆ ಅಪಘಾತದಲ್ಲಿ ವೃದ್ಧೆ ಸಾವು

ಟಿ.ನರಸೀಪುರ, ಜೂ.27- ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೂಗೂರು ಗ್ರಾಮದ ಸಮೀಪ ಜರುಗಿದೆ.
ಕೊಳ್ಳೇಗಾಲ ತಾಲ್ಲೂಕಿನ ಕಣ್ಣೂರು ಗ್ರಾಮದ ವೃದ್ಧೆ(ಹೆಸರು ತಿಳಿದು ಬಂದಿಲ್ಲ)ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇಂದು ಬೆಳಿಗ್ಗೆ ಟಿ.ನರಸೀಪುರದಿಂದ ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕೊಳ್ಳೇಗಾಲದ ಕಡೆಯಿಂದ ಬರುತ್ತಿದ್ದ ಆಪೆ ಆಟೋ ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದಿವೆ.
ಡಿಕ್ಕಿ ಹೊಡೆದ ರಭಸಕ್ಕೆ ಆಪೆ ಆಟೋದಲ್ಲಿದ್ದ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತರಾದರೆ, ಮತ್ತಿಬ್ಬರು ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಳಿದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ