
ಆನೇಕಲ್, ಜೂ.27- ರಸ್ತೆ ಬದಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಹೆಬ್ಬಗೋಡಿಯಲ್ಲಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಗೆ ಅತಿ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಟಾಟಾ ಏಸ್ ವಾಹನಕ್ಕೆ ಬೆಂಕಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಚಾಲಕ ವಾಹನದಿಂದ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುದ್ದಿ ತಿಳಿದ ಅಗ್ನಿ ಶಾಮಕ ಸಿಬ್ಬಂದಿ ವಾಹನದೊಂದಿಗೆ ತೆರಳಿ ಬೆಂಕಿ ನಂದಿಸಿದ್ದಾರೆ.
ಹೆಬ್ಬಗೋಡಿ ಠಾuಯಲ್ಲಿ ಪ್ರಕರಣ ದಾಖಲಾಗಿದೆ.