ವಿದ್ಯಾರ್ಥಿ ನಿಲಯಗಳ ಹೊರಗುತ್ತಿಗೆ ನೌಕರರ ಪ್ರತಿಭಟನೆ

 

ಬೆಂಗಳೂರು, ಜೂ.27-ವಿದ್ಯಾರ್ಥಿ ನಿಲಯಗಳ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುತ್ತಿರುವುದನ್ನು ಖಂಡಿಸಿ ನಗರದ ರೈಲ್ವೆ ನಿಲ್ದಾಣದಿಂದ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ಸಂಘದ ವತಿಯಿಂದ ನಡೆಸಿದ ಮೆರವಣಿUಯಲ್ಲಿ ಆಗಮಿಸಿದ ನೂರಾರು ಮಂದಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾSಯ ವಿದ್ಯಾರ್ಥಿ ನಿಲಯಗಳಲ್ಲಿ ನೇರ ನೇಮಕಾತಿ ಮೂಲಕ ಖಾಯಂ ನೌಕರರನ್ನು ನೇಮಕ ಮಾಡಿಕೊಳ್ಳುತ್ತಿರುವುದರಿಂದ ಸುಮಾರು 5 ಸಾವಿರ ಹೊರಗುತ್ತಿಗೆ ನೌಕರರು ಕೆಲಸ ಕಳೆದುಕೊಳ್ಳಲಿದ್ದಾರೆ. ಇದನ್ನು ತಪ್ಪಿಸಿ ಹೊರಗುತ್ತಿಗೆ ನೌಕರರ ಸೇªಯನ್ನು ಖಾಯಂ ಮಾಡುವಂತೆ ಒತ್ತಾಯಿಸಿ ಇಂದು ಧರಣಿ ನಡೆಸಲಾಯಿತು.
ಕಳೆದ ಹತ್ತಾರು ವರ್ಷಗಳಿಂದ ಅಡುಗೆ, ಕಾವಲು ಮೊದಲಾದ ಡಿ ವರ್ಗದ ಹುದ್ದೆಗಳಲ್ಲಿ ಗುತ್ತಿಗೆದಾರರ ವಂಚನೆ, ಅಧಿಕಾರಿಗಳ ಕಿರುಕುಳ ಸಹಿಸಿಕೊಂಡು ಅತ್ಯಲ್ಪ ವೇತನಕ್ಕಾಗಿ ದುಡಿಯುತ್ತಿರುವ ಈ ನೌಕರರನ್ನು ಕೆಲಸದಿಂದ ತೆಗೆದು ಹಾಕಿರುವುದು ಸರಿಯಲ್ಲ. ಇಂತಹ ನೌಕರರಿಗೆ ಕೆಲಸ ನೀಡದೆ ನೇರನೇಮಕಾತಿಯಿಂದ ಭರ್ತಿ ಮಾಡಿಕೊಳ್ಳುತ್ತಿರುವುದು ಯಾವ ನ್ಯಾಯ? ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.

ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವುದನ್ನು ಕೂಡಲೇ ನಿಲ್ಲಿಸಿ ಅವರನ್ನೇ ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು. ನಿವೃತ್ತ ವಯಸ್ಸು ತಲುಪವವರೆಗೂ ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಸಂಘದ ಮುಖಂಡರನ್ನು ಚರ್ಚೆಗೆ ಆಹ್ವಾನಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟ£ಯಲ್ಲಿ ಸಹ ಕಾರ್ಯದರ್ಶಿ ಕೆ.ಹನುಮೇಗೌಡ, ಅಧ್ಯಕ್ಷ ನಿತ್ಯಾನಂದಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ