
ದಾವಣಗೆರೆ, ಜೂ.27- ಮನೆ ಮುಂಭಾಗ ಕುಳಿತು ಮಾತನಾಡುವಾಗ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕೆಟಿಜೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಉಪ್ಪಾರ ಓಣಿಯ ನಿವಾಸಿಗಳಾದ ಜಾನಕಮ್ಮ (70), ಸುಧಾ (40) ಮೃತಪಟ್ಟ ದುರ್ದೈವಿಗಳು.
ನಿನ್ನೆ ನಗರದ ನಿಟ್ಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದ ಬಳಿ ಇರುವ ಸುಧಾ ಎಂಬುವವರ ಮನೆ ಮುಂದೆ ಜಾನಕಮ್ಮ ಮತ್ತು ಸುಧಾ ಇಬ್ಬರೂ ಕುಳಿತು ಮಾತನಾಡುತ್ತಿರುವಾಗ ಇದ್ದಕ್ಕಿದ್ದಂತೆ ಮನೆಯ ಮೇಲ್ಛಾವಣಿ ಕುಸಿದುಬಿದ್ದಿದೆ. ವೃದ್ಧೆ ಜಾನಕಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಸುಧಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆಟಿಜೆ ನಗರ ಪೆÇಲೀಸ್ ಠಾuಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.