ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದ 10 ಬಿಎಸ್ ಎಫ್ ಯೋಧರು ನಾಪತ್ತೆ

ಮುಘಲ್ ಸರಾಯ್ :ಜೂ-28: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 10 ಬಿಎಸ್ಎಫ್ ಯೋಧರು ನಾಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

ಪಶ್ಚಿಮ ಬಂಗಾಳದ ಬರ್ದಮಾನ್ ಮತ್ತು ಜಾರ್ಖಂಡ್ ಧಾನಬಾದ್ ನಿಂದ 80 ಯೋಧರ ತಂಡ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನತ್ತ ಸೇನಾ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಇದರಲ್ಲಿದ್ದ 10 ಯೋಧರು ನಾಪತ್ತೆಯಾಗಿದ್ದಾರೆ ಎಂದು ಮೊಘಲ್ ಸರಾಯಿ ಸಬ್ ಇನ್ಸ್ ಪೆಕ್ಟರ್ ಜಿತೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ರೈಲ್ವೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸೇನಾ ಯೋಧರು ರಜೆ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎಂದು ದಾಖಲಿಸಿದ್ದಾರೆ.
10 BSF jawans, heading to Samba sector, on special army train go missing

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ