ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

 

ಬೆಂಗಳೂರು, ಜೂ.28- ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಸಂಚಾರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಮ್ಮೇನಹಳ್ಳಿ ನಿವಾಸಿ ಮುನಿಕೃಷ್ಣ (40) ಮೃತಪಟ್ಟ ಬೈಕ್ ಸವಾರ.

ರಾತ್ರಿ 10.55ರಲ್ಲಿ ಮುನಿಕೃಷ್ಣ ಎಂಬುವವರು ದೇವನಹಳ್ಳಿ-ಚನ್ನರಾಯಪಟ್ಟಣ ರಸ್ತೆಯಲ್ಲಿ ಹೋಗುತ್ತಿದ್ದಾಗ ಭಿನ್ನಮಂಗಲದ ಬಳಿ ರಸ್ತೆ ತಿರುವು ಪಡೆದುಕೊಳ್ಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮವಾಗಿ ಕೆಳಗೆ ಬಿದ್ದ ಮುನಿಕೃಷ್ಣ ತಲೆಗೆ ಗಂಭೀರ ಪೆಟ್ಟಾಗಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ದೇವನಹಳ್ಳಿ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ