ಬಿಸಿಯೂಟ ಸೇವಿಸಿದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ತುರುವೇಕೆರೆ, ಜೂ.28-ಬಿಸಿಯೂಟ ಸೇವಿಸಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲೂಕಿನ ಗಡಿಭಾಗದಲ್ಲಿರುವ ತುಯಲಹಳ್ಳಿ ಶಾಲೆಗೆ ಲೆಂಕನಹಳ್ಳಿ, ನರಿಗೇಹಳ್ಳಿ, ಮಲ್ಲೂರು, ಸಿಂಕನಹಳ್ಳಿ, ಬಾನಿಪಾಳ್ಯ ಸೇರಿದಂತೆ ಸುತ್ತ ಮುತ್ತಲಿನ 140ಕ್ಕೂ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗೆ ಬರುತ್ತಿದ್ದು, ಎಂದಿನಂತೆ ನಿನ್ನೆ ಮಧ್ಯಾಹ್ನ ಬಿಸಿಯೂಟ ತಯಾರಿಸಿ ಮಕ್ಕಳಿಗೆ ಬಡಿಸಲಾಗಿದೆ. ಎಲ್ಲ ಮಕ್ಕಳು ಊಟ ಸೇವಿಸಿದ್ದು, 2.30 ರ ನಂತರ ಒಬ್ಬ ವಿದ್ಯಾರ್ಥಿ ತೀವ್ರ ಅಸ್ವಸ್ಥನಾಗಿ ಮನೆಗೆ ಹೋಗಿದ್ದಾನೆ. ನಂತರ ಇತರ ಮಕ್ಕಳು ಅಸ್ವಸ್ಥರಾಗಿದ್ದಾರೆ. ತಕ್ಷಣ ಎಸ್‍ಡಿಎಂಸಿ ಅಧ್ಯಕ್ಷ ಬಸವರಾಜು ಹಾಗೂ ಗ್ರಾಮಸ್ಥರು ಶಾಲೆಯ ಬಳಿ ತೆರಳಿ ಪೆÇೀಷಕರೊಂದಿಗೆ ಎಲ್ಲಾ ಮಕ್ಕಳನ್ನು ಆಂಬ್ಯೂಲೆನ್ಸ್ ಮತ್ತು ಒಂದು ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೂವರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ:
ಅಸ್ವಸ್ಥಗೊಂಡ 35ಕ್ಕೂ ಹೆಚ್ಚು ಮಕ್ಕಳ ಪೈಕಿ ಪ್ರೇಮ, ನಾಗರತ್ನ, ರಂಜಿತ ಎಂಬ ಮೂವರು ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದು, ಪ್ರೇಮ ಎಂಬ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಇನ್ನುಳಿದ ಮಕ್ಕಳನ್ನು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ತುರ್ತು ಚಿಕಿತ್ಸೆ ನೀಡಿ ಚೇತರಿಕೆ ಕಂಡ ಮಕ್ಕಳನ್ನು ಗ್ರಾಮಗಳಿಗೆ ಕಳಿಸಿದ್ದಾರೆ. ಬಿಸಿಯೂಟ ತಯಾರು ಮಾಡುವ ಕೇಂದ್ರದಲ್ಲಿ ಅನ್ನದಲ್ಲಿ ಹಲ್ಲಿ ಬಿದ್ದಿದ್ದು, ಊಟ ಬಡಿಸುವಾಗ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು ಗ್ರಾಮಸ್ಥರು ಹಾಗೂ ಪೆÇೀಷಕರು ಆರೋಪಿಸಿದ್ದಾರೆ.
ಬಿಗುವಿನ ವಾತವರಣ:
ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಜಮಾಯಿಸಿದ ನೂರಾರು ಗ್ರಾಮಸ್ಥರು ಹಾಗೂ ಆತಂಕಗೊಂಡ ಪೆÇೀಷಕರು ಆಗಮಿಸಿ ಸೂಕ್ತ ಚಿಕಿತ್ಸೆ ನೀಡಿ ಎಂದು ವೈದ್ಯರು ಹಾಗೂ ಅಧಿಕಾರಿಗಳ ಮೇಲೆ ಹರಿಹಾಯ್ದ ಪರಿಣಾಮ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಆಗ ಪೆÇಲೀಸರು ಹಾಗೂ ಆರೋಗ್ಯ ಅಧಿಕಾರಿಗಳು ಪರಿಸ್ಥಿತಿ ತಿಳಿಗೊಳಿಸಿದರು. ಸುದ್ದಿ ತಿಳಿದ ಕೂಡಲೇ ಶಾಸಕ ಮಸಾಲಾಜಯರಾಮ್ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಧಾವಿಸಿ ಮಕ್ಕಳಿಗೆ ಹಾಗೂ ಪೆÇೀಷಕರಿಗೆ ಧೈರ್ಯ ತುಂಬಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯರ ಬಳಿ ಮಾಹಿತಿ ಪಡೆದು ಮಕ್ಕಳನ್ನು ತಮ್ಮ ಗ್ರಾಮಗಳಿಗೆ ವಾಪಸ್ ಕಳಿಸಲು ವ್ಯವಸ್ಥೆ ಕಲ್ಪಿಸಿದರು.
ಶಾಲೆಯ ಆಹಾರದ ಶ್ಯಾಂಪಲ್ ತರಿಸಿಕೊಳ್ಳಲಾಗಿದ್ದು ಆಹಾರವನ್ನು ಲ್ಯಾಬ್‍ನಲ್ಲಿ ಪರೀಕ್ಷೆ ನಡೆಸಿದ ನಂತರವಷ್ಟೆ ನಿಖರ ಮಾಹಿತಿ ತಿಳಿಯಲಿದೆ ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀಧರ್ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ