ಮಡಿವಾಳ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಶಿರಸಿ :

2018ನೇ ಸಾಲಿನ ಎಸ್. ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ಹಾಗೂ ಪಿ.ಯು.ಸಿ.ಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಪಡೆದ ಮಡಿವಾಳ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಕರೆಯಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅಂಕ ಪಟ್ಟಿಯ ಝೆರಾಕ್ಸ್ ಪ್ರತಿಯೊಂದಿಗೆ ತಮ್ಮ ಪೂರ್ಣ ವಿಳಾಸ, ತಂದೆಯ ಉದ್ಯೋಗ, ಇತರ ವಿವರಗಳೊಂದಿಗೆ ಜುಲೈ.15ರೊಳಗೆ ವ್ಹಿ. ಬಿ. ಹೊಸೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾತಾ ಭಗವತಿ ನಾರಾಯಣ ಗುರುನಗರ, ಚಿಪಗಿ. ಶಿರಸಿ 581402 ಕ್ಕೆ ಕಳಿಸುವುದು. ಮಾಹಿತಿ ಬೇಕಾದಲ್ಲಿ 8762633458 ಕ್ಕೆ ಕರೆ ಮಾಡಬಹುದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ