
ಬೆಂಗಳೂರು, ಜೂ.28- ಅನಾರೋಗ್ಯದಿಂದ ನೊಂದಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತೀಕೆರೆಯ ನೇತಾಜಿ ಸರ್ಕಲ್ ಸಮೀಪದ ನಿವಾಸಿ ಆ್ಯಂಡ್ರೋಸ್(22) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದರೂ ಗುಣಮುಖವಾಗದ ಕಾರಣ ಇದರಿಂದ ಮನನೊದು ಮನೆಯಲ್ಲಿ ನಿನ್ನೆ ಪ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.