ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣ: ತನಿಖೆ ತೃಪ್ತಿಕರವಾಗಿಲ್ಲ: ಬಾಂಬೆ ಹೈಕೋರ್ಟ್

ಮುಂಬೈ:ಜೂ-29: ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದ ತನಿಖೆ ತೃಪ್ತಿದಾಯಕವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಸಿಬಿಐ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

ದಾಭೋಲ್ಕರ್ ಹಾಗೂ ಪನ್ಸಾರೆ ಹತ್ಯೆ ಪ್ರಕರಣ ಸಂಬಂಧ ಸಿಬಿಐ ಮತ್ತು ಸಿಐಡಿ ಅಧಿಕಾರಿಗಳು ಸಲ್ಲಿಸಿದ ತನಿಖಾ ಪ್ರಗತಿ ವರದಿ ತೃಪ್ತಿದಾಯಕವಾಗಿಲ್ಲ ಎಂದು ಪರಿಗಣಿಸಿರುವ ನ್ಯಾಯಾಲಯ, ಮುಂದಿನ ವಿಚಾರಣೆಯಲ್ಲಿ ಕಡ್ಡಾಯವಾಗಿ ಹಾಜರಿರಲೇಬೇಕೆಂದು ಸಿಬಿಐನ ಹಿರಿಯ ಅಧಿಕಾರಿಗಳಿಗೆ ಮತ್ತು ಮಹಾರಾಷ್ಟ್ರ ಸರಕಾರಕ್ಕೆ ಸಮನ್ಸ್ ನೀಡಿದೆ.

ಜುಲೈ 12ರಂದು ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸಿಬಿಐನ ಜಂಟಿ ನಿರ್ದೇಶಕರು ಹಾಗೂ ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ನ್ಯಾಯಮೂರ್ತಿ ಎಸ್ ಸಿ ಧರ್ಮಾಧಿಕಾರಿ ಮತ್ತು ಭಾರತಿ ಡಾಂಗ್ರೆ ನೇತೃತ್ವದ ಪೀಠ ಆದೇಶಿಸಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಪ್ರಗತಿ ಸಾಧಿಸಿರುವುದನ್ನು ಉಲ್ಲೇಖಿಸಿರುವ ನ್ಯಾಯಾಲಯ, ದಾಬೋಲ್ಕರ್ ಮತ್ತು ಪನ್ಸಾರೆ ಹತ್ಯೆ ಪ್ರಕರಣದಲ್ಲಿ ನಿರ್ಲಕ್ಷ್ಯವಹಿಸುತ್ತಿದ್ದೀರಿ ಎಂದು ತನಿಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

Narendra Dabholkar, Govind Pansare murder investigations,Bomby HC raps agencies for ‘unsatisfactory’ probe

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ