ಅ.ದೇವೇಗೌಡರಿಂದ ವಿಧಾನಪರಿಷತ್ ನೂತನ ಸದಸ್ಯರಾಗಿ ಪ್ರಮಾಣ ವಚನ

OLYMPUS DIGITAL CAMERA

 

ಬೆಂಗಳೂರು,ಜೂ.29-ಬೆಂಗಳೂರು ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿದ್ದ ಅ.ದೇವೇಗೌಡ ಅವರು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಪರಿಷತ್‍ನ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ಅವರು ವಿಧಾನಸೌಧದಲ್ಲಿ ಅ.ದೇವೇಗೌಡರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಅ.ದೇವೇಗೌಡ ಅವರು ಭಗವಂತನ ಹೆಸರಿನಲ್ಲಿ ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರು ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ದೇವೇಗೌಡ ಚುನಾಯಿತರಾಗಿದ್ದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ಸಭಾಪತಿ ನೂತನ ಸದಸ್ಯರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.
ನಂತರ ದೇವೇಗೌಡರ ಅಭಿಮಾನಿಗಳು,ಪಕ್ಷದ ಮುಖಂಡರು ಅಭಿನಂದನೆ ಸಲ್ಲಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ