ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಚಕಮಕಿ: ಗಸ್ತಿನಲ್ಲಿದ್ದ ಯೋಧರ ಮೇಲೆ ಉಗ್ರರ ದಾಳಿ

ಕುಪ್ವಾರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಕಾಳಗ ನಡೆದಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಇಂದು ಬೆಳಗ್ಗೆ ಮೊದಲು ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ಮಧ್ಯೆ ಎನ್​​ಕೌಂಟರ್​ ನಡೆದಿದ್ದು, ಇದರಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಇತ್ತ, ಇದೇ ವೇಳೆ ಶೋಷಿಯನ್ ಜಿಲ್ಲೆಯಲ್ಲಿ ಗಸ್ತಿನಲ್ಲಿದ್ದ ಯೋಧರ ಮೇಲೆ ಉಗ್ರರು ಗ್ರೆನೇಡ್ ದಾಳಿ ಮಾಡಿ ದೃಷ್ಕೃತ್ಯ ಎಸಗಿದ್ದಾರೆ.
ಅಹಗಾಮ್​ನಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಇದರಲ್ಲಿ ಓರ್ವ ಯೋಧ ಗಾಯಗೊಂಡಿದ್ದಾನೆ. ಈ ಘಟನೆ ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ದೌಡಾಯಿಸಿದ್ದು, ಸ್ಥಳದಲ್ಲಿ ಉಗ್ರರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ