ರೈತರ ಕೃಷಿ ಸಾಲಗಳ ಬಗ್ಗೆ ಅಧಿಕೃತ ಅಂಕಿ-ಅಂಶಗಳು ಸಿಕ್ಕ ಬಳಿಕ ಸೂಕ್ತ ನಿರ್ಧಾರ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

 

ಬೆಂಗಳೂರು, ಜೂ.29- ರೈತರ ಕೃಷಿ ಸಾಲಗಳು ಯಾವ Á್ಯಂಕಿನಲ್ಲಿ ಯಾವ ಪ್ರಮಾಣದಲ್ಲಿ ಇದೆ ಎಂಬುದು ಅಧಿಕೃತ ಅಂಕಿ-ಅಂಶಗಳು ಸಿಕ್ಕಿಲ್ಲ. ಅದು ಸಿಕ್ಕ ನಂತರ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರ ಜತೆ ಚರ್ಚೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ವಿಷಯದಲ್ಲಿ ಒಬ್ಬಬ್ಬರು ಒಂದು ರೀತಿಯ ಮಾಹಿತಿ ನೀಡುತ್ತಿದ್ದಾರೆ. ಯಾರ ಬಳಿಯೂ ಸ್ಪಷ್ಟ ಮಾಹಿತಿ ಇಲ್ಲ. ಇಲಾಖೆಯ ಅಧಿಕಾರಿಗಳಿಂದ ಅದನ್ನು ಪಡೆದು ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಡಿಸುತ್ತಿರುವ ಬಜೆಟ್‍ನಲ್ಲಿ ಹಿಂದಿನ ಸರ್ಕಾರದ ಯೋಜನೆಗಳೂ ಇರುತ್ತವೆ. ಹೊಸ ಯೋಜನೆಗಳನ್ನೂ ಪ್ರಕಟಿಸಲಾಗುತ್ತದೆ. ಸಿದ್ದರಾಮಯ್ಯ ಅವರು ಪ್ರಕಟಿಸಿದ ಎಲ್ಲಾ ಯೋಜನೆಗಳು ಮುಂದುವರೆಯಬೇಕೆಂದು ಕಳೆದ ಬಾರಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಒಂದು ವೇಳೆ ಆರ್ಥಿಕ ಹೊರೆಯಾಗುವ ಯೋಜನೆಗಳಿದ್ದರೆ ಅದನ್ನು ಪುನರ್ ಪರಿಶೀಲನೆ ಮಾಡುವಂತೆಯೂ ಸಲಹೆ ನೀಡಲಾಗಿದೆ. ಹೀಗಾಗಿ ಜು.5ರಂದು ಮಂಡಿಸುತ್ತಿರುವ ಬಜೆಟ್ ಪರಿಷ್ಕøತವೋ, ಹೊಸ ಬಜೆಟ್ಟೋ ಎಂಬುದು ನಿಮ್ಮ ವಿವೇಚನೆಗೆ ಬಿಟ್ಟದ್ದು ಎಂದು ಮಾಧ್ಯಮದವರಿಗೆ ಹೇಳಿದರು.
ಇಂದು ನಡೆದ ಸಭೆಯಲ್ಲಿ ಸಂಪುಟ ವಿಸ್ತರಣೆಯ ಕುರಿತು ಯಾವುದೇ ಚರ್ಚೆಯಾಗಿಲ್ಲ. ಸಂಪುಟ ವಿಸ್ತರಣೆ ಯಾವ ಕ್ಷಣಕ್ಕಾದರೂ ಆಗಬಹುದು. ಆಗದೆಯೂ ಇರಬಹುದು. ಈ ಹಿಂದೆಲ್ಲಾ ಅಧಿವೇಶನ ನಡೆಯುವ 24 ಗಂಟೆ ಮೊದಲಷ್ಟೇ ಸಂಪುಟ ವಿಸ್ತರಣೆಯಾಗಿರುವ ಉದಾಹರಣೆಗಳಿವೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಅಸಮಾಧಾನ ಹೊಂದಿಲ್ಲ. ಅವರು ಚೆನ್ನಾಗಿದ್ದಾರೆ. ಅವರನ್ನು ಇನ್ನಷ್ಟು ಚೆನ್ನಾಗಿ ತೋರಿಸುವ ಸಲುವಾಗಿ ಮಾಧ್ಯಮಗಳು ವರ್ಣರಂಚಿತ ವರದಿಗಳನ್ನು ಪ್ರಕಟಿಸಿವೆ ಎಂದು ಹೇಳಿದರು.

ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವ ನಿಟ್ಟಿನಲ್ಲಿ ವೀರಪ್ಪಮೊಯ್ಲಿ ಅವರ ಸಮಿತಿ ರಚಿಸಿರುವ ಕರಡನ್ನು ಇಂದು ನಾನು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ ಹಾಗೂ ವೀರಪ್ಪಮೊಯ್ಲಿ ಅವರು ಪರಿಶೀಲನೆ ಮಾಡಿ ಕೆಲವು ಸಲಹೆ, ಸೂಚನೆಗಳನ್ನು ನೀಡಿದ್ದೇವೆ. ಜೆಡಿಎಸ್‍ನ ಮುಖಂಡರ ಜತೆ ಚರ್ಚೆ ಮಾಡಿ ಕರಡನ್ನು ಅಂತಿಮಗೊಳಿಸಲಾಗುತ್ತದೆ. ಭಾನುವಾರ ನಡೆಯುವ ಸಮನ್ವಯ ಸಮಿತಿಯಲ್ಲಿ ಅದನ್ನು ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ನಂತರ ಮೈತ್ರಿ ಸರ್ಕಾರ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಪ್ರಸ್ತಾವಿತ ಯೋಜನೆಗಳನ್ನು ಜಾರಿಗೊಳಿಸಲಿದೆ. ಅದಕ್ಕೆ ಬೇಕಾದ ಹಣಕಾಸು ಸೌಲಭ್ಯವನ್ನು ಒದಗಿಸಲಿದೆ ಎಂದು ಪರಮೇಶ್ವರ್ ತಿಳಿಸಿದರು.
ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯದ 16 ಮಂದಿ ಕ್ರಿಮಿನಲ್‍ಗಳ ವಿರುದ್ಧ ರೆಡ್‍ಕಾರ್ನರ್ ನೋಟಿಸ್ ಜಾರಿಗೊಳಿಸಿದೆ. ಅದು ಅತ್ಯಂತ ತುರ್ತು ಮತ್ತು ಗಂಭೀರ ನೋಟಿಸ್ ಆಗಿದ್ದು, ಪೆÇಲೀಸರು ತಡ ಮಾಡದೆ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ