ಪಶುಸಂಗೋಪನ ಇಲಾಖೆಗೆ ಉತ್ತೆಜನ, ಆಯವ್ಯಯದಲ್ಲಿ ಹೆಚ್ಚಿನ ಅನುದಾನ – ಪಶುಸಂಗೋಪನ ಸಚಿವ ವೆಂಕಟರಾವ್ ನಾಡಗೌಡ

ಹುಬ್ಬಳ್ಳಿ,ಜೂ.29- ರಾಜ್ಯ ಸಮ್ಮಿಶ್ರ ಸರ್ಕಾರದ ಆಯವ್ಯಯದಲ್ಲಿ ಪಶುಸಂಗೋಪನ ಇಲಾಖೆಗೆ ಉತ್ತೆಜನ ನೀಡಲು 2.5 ಸಾವಿರ ಕೋಟಿ ರೂ. ಅನುದಾನ ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಪಶುಸಂಗೋಪನ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜು.5ರಂದು ಮಂಡನೆಯಾಗಲಿರುವ ಬಜೆಟ್‍ನಲ್ಲಿ ತಮ್ಮ ಇಲಾಖೆಗೆ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಲ್ಲಿ ಮನವಿ ಮಾಡಿರುವುದಾಗಿ ಹೇಳಿದರು. ಪಶುಸಂಗೋಪನ ಇಲಾಖೆಯಲ್ಲಿ ವೈದ್ಯರ ಕೊರತೆ ಇದ್ದು ಸದ್ಯದಲ್ಲೇ 500 ಪಶು ವೈದ್ಯರ ಹುದ್ದೆ ನೇಮಕ ಮಾಡಲಾಗುವುದು ಎಂದು ಹೇಳಿದರು.
ಇಸ್ರೇಲ್ ತಂತ್ರಜ್ಞಾನ ಬಳಸಿ ಜಾನುವಾರುಗಳ ಮೇವು ಬೆಳೆಯಲು ಪೈಲೆಟ್ ಯೋಜನೆ ರೂಪಿಸಲಾಗಿದೆ. ಜಮೀನು ಇಲ್ಲದವರು ಕೂಡ ಹೈನುಗಾರಿಕೆ ಮಾಡಬಹುದು ಎಂದರು. ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಟೇಕಫ್ ಆಗಿಲ್ಲ ಎಂಬುದರಲ್ಲಿ ಅರ್ಥವಿಲ್ಲ. ಮುಂದಿನ ಐದು ವರ್ಷಗಳ ಕಾಲ ಸರ್ಕಾರ ಇರುತ್ತದೆ. ಈ ಸಮ್ಮಿಶ್ರ ಸರ್ಕಾರವನ್ನು ದೇವರೇ ರಚಿಸಿದ್ದು, ಐದು ವರ್ಷ ಸರ್ಕಾರ ಮುನ್ನಡೆಯಲಿದೆ. ಜು.5ರಂದು ಮುಖ್ಯಮಂತ್ರಿ ಬಜೆಟ್ ಮಂಡನೆ ಮಾಡಲಿದ್ದು, ಅದರ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ