ಬೆಂಗಳೂರು,ಜೂ.29- ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ಸಂದ ಸುವರ್ಣ ಸಂಭ್ರಮದ ಅಂಗವಾಗಿ ಇಂದು ಸಂಜೆ 5.30ಕ್ಕೆ ಚಾಮರಾಜಪೇಟೆಯಲ್ಲಿ ಶ್ರೀ ಕರಷ್ಣರಾಜ ಪರಿಷನ್ಮಂದಿರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಸದ್ಭಾವನಾ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿಚಾರ ಸಂಕಿರಣದಲ್ಲಿ ಕುವೆಂಪು ಸಾಹಿತ್ಯದಲ್ಲಿ ಚರಿತ್ರೆ ಮತ್ತು ಪುರಾಣ ಎಂಬ ವಿಚಾರ ಮಂಥನ ನಡೆಯಲಿದೆ.
ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಂಗಳೂರು ವಿವಿಯ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ.ಅಶ್ವಥ್ ನಾರಾಯಣ, ಕುವೆಂಪುರ ಅವರ ಕಾದಂಬರಿಗಳಲ್ಲಿನ ಚರಿತ್ರೆಯೊಂದಿಗೆ ಅನುಸಂಧಾನ ಎಂಬ ವಿಷಯವನ್ನು ಮಂಡನೆ ಮಾಡಲಿದ್ದಾರೆ.
ಉಪನ್ಯಾಸಕ ಎಚ್.ಎಸ್.ಸತ್ಯನಾರಾಯಣ, ಕುವೆಂಪುರ ಅವರ ಕಾವ್ಯಗಳಲ್ಲಿ ಚರಿತ್ರೆ ಮತ್ತು ಪುರಾಣದ ನೆಲೆಗಳು ಎಂಬ ವಿಷಯ ಮಂಡನೆ ಮಾಡಲಿದ್ದಾರೆ.
ಭಾರತೀಯ ಇತಿಹಾಸ ಅನುಸಂಧಾನ ಪರಿಷತ್ ಎಸ್.ಕೆ.ಅರುಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸದ್ಬಾವನಾ ಪ್ರತಿಷ್ಠಾನದ ಅಧ್ಯಕ್ಷ ಎಂ.ಪ್ರಕಾಶಮೂರ್ತಿ, ಸ್ವಾಗತ-ಪ್ರಸ್ತಾವನೆ ಸಲ್ಲಿಸಲ್ಲಿದ್ದಾರೆ.