ರೈತರ ಮೇಲೆ ಚಿರತೆ ದಾಳಿ!

ತುಮಕೂರು, ಜೂ.29- ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ಮಲ್ಲೇನಹಳ್ಳಿಯಲ್ಲಿ
ನಡೆದಿದೆ. ಕರಿಯಣ್ಣ (55), ಶಿವಣ್ಣ (49) ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ರೈತರು.
ಇಂದು ಬೆಳಗ್ಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಚಿರತೆ ಇಬ್ಬರನ್ನೂ ಗಂಭೀರವಾಗಿ ಗಾಯಗೊಳಿಸಿದೆ. ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ಗಲಾಟೆ ಮಾಡಿದ್ದರಿಂದ ಚಿರತೆ ಪರಾರಿಯಾಗಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಡವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಈ ಭಾಗದಲ್ಲಿ ಚಿರತೆ ದಾಳಿ ಹೆಚ್ಚಾಗಿದ್ದು ಇದುವರೆಗೂ 100ಕ್ಕೂ ಹೆಚ್ಚು ಕುರಿಗಳನ್ನು ತಿಂದು ಹಾಕಿದೆ ಎಂದು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದರೂ ಕೂಡ ಇದುವರೆಗೂ ಚಿರತೆ ಬಂಧನಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ