2-3 ದಿನಗಳಲ್ಲಿ ಇಡೀ ದೇಶದಲ್ಲಿ ಮುಂಗಾರು ಮಳೆ

ನವದೆಹಲಿ,ಜೂ.29- ಇನ್ನು 2-3 ದಿನಗಳಲ್ಲಿ ಇಡೀ ದೇಶದಲ್ಲಿ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಮುಂಗಾರು ಆಗಮಿಸಿರದ ಗುಜರಾತ್, ರಾಜಸ್ಥಾನದ ಹಲವು ಭಾಗಗಳು ಸೇರಿದಂತೆ ದೇಶದ ಎಲ್ಲ ಭಾಗಗಳಿಗೂ ಮುಂಗಾರು ಮಳೆ ಸುರಿಯಲಿದೆ. ವಾಯುವ್ಯ ಭಾಗದ ಮಳೆಯಾಗದ ಭಾಗಗಳಲ್ಲೂ ಧಾರಾಕಾರ ಮಳೆ ಸುರಿಯಲಿದೆ. ಈ ಭಾಗಗಳಲ್ಲಿ ಈಗಾಗಲೇ ಸುರಿಯುತ್ತಿರುವ ಮಳೆ ಇನ್ನೂ 2-3 ದಿನ ತೀವ್ರಗೊಳ್ಳಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ. ಮುಂಬೈಯಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಸುರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರ ಭಾರತದ ಬಹುತೇಕ ಎಲ್ಲ ರಾಜ್ಯಗಳಲ್ಲೂ ಮಳೆಯ ಅಬ್ಬರ ತೀವ್ರಗೊಳ್ಳಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ