ಎರಡು ದಿನಕ್ಕೊಮ್ಮೆ ನೀರು ಬಿಡಲು ಅಧಿಕಾರಿಗಳಿಗೆ ಸೂಚನೆ – ಶ್ಯಾಮನೂರು ಶಿವಶಂಕರಪ್ಪ

ದಾವಣಗೆರೆ,ಜೂ.30- ನಗರದಲ್ಲಿರುವ 30 ಓವರ್‍ಹೆಡ್ ಟ್ಯಾಂಕ್‍ಗಳನ್ನು ತುಂಬಿಸಿ ಪ್ರತಿ ಎರಡು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಬೇಕೆಂದು ಅಧಿಕಾರಿಗಳಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸೂಚಿಸಿದರು.
ತಮ್ಮ ಗೃಹ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸದಸ್ಯರು ಅಧಿಕಾರಿಗಳ ಸಭೆ ನಡೆಸಿ ಶ್ಯಾಮನೂರು ಶಿವಶಂಕರಪ್ಪ ಎರಡು ದಿನಕ್ಕೊಮ್ಮೆ ಕಡ್ಡಾಯವಾಗಿ ಕೊಡುವಂತೆ ಆದೇಶಿಸಿದರು. ನಗರದ ಕುಂಡುವಾಡ ಕೆರೆ ಮತ್ತು “ಮಾಸಮಟ್ಟಿ ಕೆರೆಗಳಿಂದ 30 ಓವರ್ ಹೆಡ್ ಟ್ಯಾಂಕ್‍ಗಳಿಗೆ ನೀರು ತುಂಬಿಸಿ ಪ್ರತಿ ಎರಡು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಸುವಂತೆ ಹೇಳಿದರು. ಈ ಎರಡು ಕೆರೆಗಳಲ್ಲಿ ನೀರು ಕಡಿಮೆಯಾದರೆ ತುಂಗಭದ್ರ ನದಿಗೆ ಹೊಂದಿಕೊಂಡಿರುವ ರಾಜನಳ್ಳಿ ಜಾಕ್‍ವೆಲ್‍ನಿಂದ ನೀರು ಸರಬರಾಜಿಗೆ ಕ್ರಮ ಕೈಗೊಳ್ಳುವುದಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಶ್ಯಾಮನೂರು ಶಿವಶಂಕರಪ್ಪ ಉತ್ತರಿಸಿದರು. ಮಹಾನಗರ ಪಾಲಿಕೆ ಮೇಯರ್ ಶೋಭಾ ಪಲ್ಲಾಗಟ್ಟೆ , ಉಪಮೇಯರ್, ಸದಸ್ಯರಾದ ಶಿವನಹಳ್ಳಿ ರಮೇಶ್, ದಿನೇಶ್.ಕೆ.ಶೆಟ್ಟಿ, ಎ.ನಾಗರಾಜ್, ಎಲ್.ಎಂ.ಹನುಮಂತಪ್ಪ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ