ರಸ್ತೆ ಕಾಮಗಾರಿಗಳನ್ನು ಸೆಪ್ಟೆಂಬರ್ 15ರೊಳಗೆ ಪೂರ್ಣಗೊಳಿಸಿ: ಬಿಡಿಎ ಅಧಿಕಾರಿಗಳಿಗೆ ಸಿಎಂ ಆದೇಶ

 

ಬೆಂಗಳೂರು, ಜೂ.30- ಸರ್ವಿಸ್ ರಸ್ತೆ ಸೇರಿದಂತೆ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15ರೊಳಗೆ ಪೂರ್ಣಗೊಳಿಸುವಂತೆ ಬಿಡಿಎ ಅಧಿಕಾರಿಗಳಿಗೆ ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು.

ಬೆಳ್ಳಂಬೆಳಗ್ಗೆ ಮಹದೇವಪುರ ಕ್ಷೇತ್ರದ ದೊಡ್ಡನೆಕ್ಕುಂದಿ ಫ್ಲೈ ಓವರ್ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಈ ಕಾಮಗಾರಿ ನಾಲ್ಕು ವರ್ಷಗಳಿಂದ ನಡೆಯುತ್ತಿದ್ದು, ಸರ್ವೀಸ್ ರಸ್ತೆ, ಫುಟ್‍ಪಾತ್, ಎಲೆಕ್ಟ್ರಿಕಲ್ ಬೋರ್ಡ್, ರಾಜಕಾಲುವೆ ಒತ್ತುವರಿ ತೆರವು ಮತ್ತಿತರ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಸುತ್ತಮುತ್ತಲಿನ ಪ್ರದೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದು, 10 ಲಕ್ಷ ಪ್ರಯಾಣಿಕರು ಸಂಚರಿಸುವ ಪ್ರಮುಖ ರಸ್ತೆಯಾಗಿದೆ. ಇಲ್ಲಿನ ಮಂದಗತಿಯ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಮಳೆ ಬಂದಾಗ ಮೂರು ಅಡಿಗಳಷ್ಟು ನೀರು ನಿಲ್ಲುವುದರಿಂದ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಷಿಪ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ಜುಲೈ 29ಕ್ಕೆ ನಡೆಯಲಿರುವ ದೊಡ್ಡನೆಕ್ಕುಂದಿ ಫ್ಲೈ ಓವರ್ ಉದ್ಘಾಟನೆ ಹಿನ್ನೆಲೆಯಲ್ಲಿ ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪರಿಶೀಲನೆ ಕಾರ್ಯ ಕೈಗೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ